ನಾಳೆಯಿಂದ ಕರ್ನಾಟಕದಲ್ಲಿ 3 ದಿನ ಮತ್ತೆ ಭಾರೀ ಮಳೆ ಸಾಧ್ಯತೆ:ಮುನ್ಸೂಚನೆ

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿ ಮಳೆ ಸ್ವಲ್ಪ ವಿರಾಮ ನೀಡಿತ್ತು. ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ನವೆಂಬರ್ 26ರಿಂದ ರಾಜ್ಯದಲ್ಲಿ ಮತ್ತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ, ಹಾಸನ. ದಾವಣಗೆರೆ, ಚಿಕ್ಕಬಳ್ಳಾಪುರ, ಮೈಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಚಳಿ ಸಹ ಆರಂಭವಾಗಲಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಚಳಿ ಮತ್ತು ಸುಳಿ ಗಾಳಿಯ ಜೊತೆ ಒಣ ಹವೆ ಇರಲಿದೆ. ಹವಾಮಾನ ಇಲಾಖೆಯ ಪ್ರಕಾರ ಬೆಂಗಳೂರು, ಬೆಂಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ ಮತ್ತು ತುಮಕೂರಿನಲ್ಲಿ ನ.26ರಿಂದ ಮುಂದಿನ 3 ದಿನ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಚಂಡಮಾರುತದ ಕೇಂದ್ರ ಬಿಂದು ನೈಋತ್ಯ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದರ ಪ್ರಭಾವದಿಂದ ಮುಂದಿನ 24 ಗಂಟೆಗಳಲ್ಲಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪ್ರದೇಶವಾಗಿ ರೂಪಾಂತರಗೊಳ್ಳುವ ಸಾಧ್ಯತೆಯಿದೆ ಸಾಧ್ಯತೆಯಿದೆ. ಇದು ಶ್ರೀಲಂಕಾ ಮತ್ತು ದಕ್ಷಿಣ ತಮಿಳುನಾಡು ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ” ಎಂದು ಹೇಳಿದೆ.
ಮುಂದಿನ ಮೂರು ದಿನಗಳಲ್ಲಿ ಆಂಧ್ರಪ್ರದೇಶದ ಕರಾವಳಿ, ಯಾನಂ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆಯಲಿದ್ದು, ಇನ್ನೂ ಮೂರ್ನಾಲ್ಕು ದಿನ ಕೆಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಇಂದು ಮತ್ತೆ ನಾಳೆ ತಮಿಳುನಾಡಿನಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತದ ಬಂಗಾಳಕೊಲ್ಲಿಯತ್ತ ಸಾಗಿ ವಾಯುಭಾರ ಕುಸಿತವಾಗಲಿದ್ದು, ಈ ಮಾರುತಗಳು ತಮಿಳುನಾಡು ಕರಾವಳಿಯತ್ತ ಚಲಿಸುವ ಸಾಧ್ಯತೆಗಳಿರುವುದರಿಂದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ