ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಿಸಿದ ರಾಜ್ಯಪಾಲ ಗೆಹ್ಲೋಟ್‌

posted in: ರಾಜ್ಯ | 0

ಶಿವಮೊಗ್ಗ: ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕಗೊಂಡ ನಂತರ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಅವರು, ಇಂದು ವಿಶ್ವ ವಿಖ್ಯಾತ ಜೋಗ ಜಲಪಾತಕ್ಕೆ ತೆರಳಿ, ಜೋಗದ ದೃಶ್ಯ ವೈಭವವನ್ನು ವೀಕ್ಷಿಸಿದರು.
.ಬುಧವಾರದಿಂದ ಶಿವಮೊಗ್ಗ ಜಿಲ್ಲೆ ಪ್ರವಾಸದಲ್ಲಿರುವ ರಾಜ್ಯಪಾಲ ಗೆಹ್ಲೋಟ್ ಅವರು ಇಂದು ಜೋಗ ಜಲಪಾತ ವೀಕ್ಷಣೆ ಮಾಡಿದರು. ಈ ವೇಳೆ ಜೋಗ ಜಲಪಾತದ ಎದುರು ಭಾವಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.
ನಿನ್ನೆ ಮಧ್ಯಾಹ್ನ ರಸ್ತೆ ಮಾರ್ಗವಾಗಿ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ರಾಜ್ಯಪಾಲರು ಪಿಇಎಸ್‌ ಕಾಲೇಜಿನಲ್ಲಿ ಆಯೋಜನೆಗೊಂಡಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನಂತರ ರಾತ್ರಿ ಜಿಲ್ಲೆಯ ಸಾಗರ ತಾಲೂಕಿನ ಜೋಗಕ್ಕೆ ಬಂದು ವಾಸ್ತವ್ಯ ಮಾಡಿದ್ದರು. ಇಂದು ಮುಂಜಾನೆ ಜೋಗದ ಜಲಪಾತಕ್ಕೆ ತೆರಳಿ ಜಲಪಾತದ ದೃಶ್ಯ ವೈಭವವನ್ನು ವೀಕ್ಷಿಸಿದರು. ಈ ಬಳಿಕ ಶರಾವತಿ ನದಿಯ ಹಿನ್ನೀರಿಗೆ ತೆರಳಿ ವೀಕ್ಷಿಸಿದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ