ಸಚಿವ ಗೋವಿಂದ ಕಾರಜೋಳ ಕಾರು ಡಿಕಿ: ಬೈಕ್‌ ಸವಾರನಿಗೆ ಗಾಯ

posted in: ರಾಜ್ಯ | 0

ಬೆಂಗಳೂರು: ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಇಂದು (ಗುರುವಾರ) ನಡೆದಿದೆ.
ನೆಲಮಂಗಲದ ಮಹಿಮಾಪುರ ಗೇಟ್ ಬಳಿ ಅಪಘಾತವಾಗಿದ್ದು ಬಳಿ ಸಚಿವ ಗೋವಿಂದ ಕಾರಜೋಳ ಅವರ ಕಾರು ಅಪಘಾತಕ್ಕೀಡಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವರ ಕಾರು ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬೈಕ್‌ ಸವಾರನಿಗೆ ಗುದ್ದಿದ ಪರಿಣಾಮ ಬೈಕ್‌ ಸವಾರನ ಕಾಲು ಮುರಿದಿದೆ ಎನ್ನಲಾಗಿದೆ. ಗಾಯಾಳುವನ್ನು ತಾಳೆಕೆರೆ ಪಾಳ್ಯ ನಿವಾಸಿ ಕೃಷ್ಣ ಮೂರ್ತಿ(45) ಎಂದು ಗುರುತಿಸಲಾಗಿದೆ.
ಸಚಿವ ಗೋವಿಂದ ಕಾರಜೋಳ ಅವರು ತುಮಕೂರಿನಿಂದ ಬೆಂಗಳೂರಿಗೆ ಕಡೆಗೆ ತೆರಳುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ.
ಅಪಘಾತದ ನಂತರ ಗಾಯಾಳುವನ್ನು ಆಂಬುಲೆನ್ಸ್‌ನಲ್ಲಿ ಕಳುಹಿಸಿ ಸಚಿವರು ತಾವೂ ಆಸ್ಪತ್ರೆಗೆ ಭೇಟಿ ನೀಡಿದರು. ಚಿಅಪಘಾತದ ನಂತರ ಕಾರಜೋಳ, ನೆಲಮಂಗಲ ಆಸ್ಪತ್ರೆಗೆ ಭೇಟಿ ನೀಡಿ ರೋಗಿಯ ಆರೋಗ್ಯ ವಿಚಾರಿಸಿದರು. ಅಲ್ಲದೆ, ವೈದ್ಯರ ಜೊತೆ ಚರ್ಚೆ ನಡೆಸಿ ಗಾಯಾಳುವಿನ ಆರೋಗ್ಯ ವಿಚಾರಿಸಿ ಆತನ ಖರ್ಚು ವೆಚ್ಚ ಭರಿಸುವುದಾಗಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತು ನೆಲಮಂಗಲ ಟ್ರಾಫಿಕ್ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ