ಕಾನೂನು ಪದವಿ ಸೆಮಿಸ್ಟರ್ ಪರೀಕ್ಷೆ ನಡೆಸಲು ಕೆಎಸ್‌ಎಲ್‌ಯುಗೆ ಹೈಕೋರ್ಟ್‌ನಿಂದ ಅನುಮತಿ

ಬೆಂಗಳೂರು: ಕಾನೂನು ಪದವಿ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಕಾನೂನು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.
ಪರೀಕ್ಷೆಗಳಿಗೆ ತಡೆ ನೀಡಿ ಏಕಸದಸ್ಯ ನ್ಯಾಯಪೀಠ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕರ್ನಾಟಕ ಕಾನೂನು ವಿವಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಪರೀಕ್ಷೆಗಳಿಗೆ ಅನುಮತಿಸಿ ಮಧ್ಯಂತರ ಆದೇಶ ನೀಡಿದೆ. ಪರೀಕ್ಷೆ ನಡೆಸಲು ವಿಶ್ವ ವಿದ್ಯಾಲಯಕ್ಕೆ ಅನುಮತಿ ನೀಡಿರುವ ವಿಭಾಗೀಯ ನ್ಯಾಯಪೀಠ, ಮುಂದಿನ ಆದೇಶದವರಗೆ ಪರೀಕ್ಷಾ ಫಲಿತಾಂಶ ಪ್ರಕಟಿಸಬಾರದು ಎಂದು ನಿರ್ದೇಶಿಸಿದೆ.
ಯುಜಿಸಿ ನಿರ್ದೇಶನದ ಅನುಸಾರ ಕೋವಿಡ್ ಸಂದರ್ಭದಲ್ಲಿ ತರಗತಿಗಳು ಸರಿಯಾಗಿ ನಡೆಯದ ಕಾರಣ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದೆಲ್ಲ ವಿದ್ಯಾರ್ಥಿಗಳನ್ನು ಮುಂದಿನ ಸೆಮಿಸ್ಟರ್ ಗಳಿಗೆ ಬಡ್ತಿ ನೀಡಬೇಕಿತ್ತು. ಆದರೆ, ವಿವಿ ಪರೀಕ್ಷೆ ನಡೆಸಲು ಮುಂದಾಗಿದೆ. ಈ ಕ್ರಮ ಸರಿಯಲ್ಲ ಎಂದು ನವೀನ್ ಕುಮಾರ್ ಸೇರಿದಂತೆ 10 ವಿದ್ಯಾರ್ಥಿಗಳು ಹೈಕೋರ್ಟಿಗೆ ತಕರಾರು ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಇದೇ ನವೆಂಬರ್ 15ರಿಂದ ನಡೆಯಬೇಕಿದ್ದ ವಿವಿಯ ಪರೀಕ್ಷಾ ವೇಳಾ ಪಟ್ಟಿಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕ ಕಾನೂನು ವಿವಿ ಮೇಲ್ಮನವಿ ಸಲ್ಲಿಸಿತ್ತು.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement