ಬೆಂಗಳೂರು: ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಹಂಸಲೇಖ

ಬೆಂಗಳೂರು: ಪೇಜಾವರ ಅಧೋಕ್ಷಜ ಮಠದ ಹಿಂದಿನ ಮಠಾಧೀಶರಾದ ದಿವಂಗತ ವಿಶ್ವೇಶತೀರ್ಥರ ಬಗ್ಗೆ ಹಂಸಲೇಖ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ದೂರಿನ ವಿಚಾರಣೆಗೆ ಸಂಗೀತ ನಿರ್ದೇಶಕ ನಗರದ ಬಸವನಗುಡಿ ಠಾಣೆಗೆ ಗುರುವಾರ ಹಾಜರಾದರು. ವಿ
ತನಿಖಾಧಿಕಾರಿಗಳ ಪ್ರಶ್ನೆಗಳಿಗೆ ಹಂಸಲೇಖ ಸಾವಧಾನವಾಗಿ ಉತ್ತರಿಸಿದರು. ಈ ಪ್ರಕರಣದ ಬಗ್ಗೆ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಲಿರುವ ತನಿಖಾಧಿಕಾರಿಗಳು ಅವಶ್ಯಕತೆ ಇದ್ದರೆ ಮತ್ತೆ ವಿಚಾರಣೆಗೆ ಕರೆಯುವುದಾಗಿ ತಿಳಿಸಿದ್ದಾರೆ. ತನಿಖಾಧಿಕಾರಿ ರಮೇಶ ವಿಚಾರಣೆ ವೇಳೆ ಹಂಸಲೇಖ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದರು ಎಂದು ತಿಳಿಸಿದ್ದಾರೆ.
ಠಾಣೆಯ ಎದುರು ಹಂಸಲೇಖ ಪರ-ವಿರುದ್ಧ ಪ್ರತಿಭಟನೆಗಳು ನಡೆದವು. ವಿಚಾರಣೆ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಲು ಪೊಲೀಸರು ನಿರಾಕರಿಸಿದರು. ಪ್ರಶ್ನೆಗಳಿಗೆ ಉತ್ತರ ಪಡೆದಿದ್ದೇವೆ. ಕಾನೂನು ಪ್ರಕಾರ ತನಿಖೆ ನಡೆಸಿ ನ್ಯಾಯಾಲಯಕ್ಕೆ ವರದಿ ನೀಡುತ್ತೇವೆ ಎಂದು ದಕ್ಷಿಣ ವಿಭಾಗ ಡಿಸಿಪಿ ಹರೀಶ್ ಪಾಂಡೆ ಹೇಳಿದರು. ಠಾಣೆಯ ಎದುರು ನೆರೆದಿದ್ದ ಹಿಂದೂಪರ ಹಾಗೂ ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ಚದುರಿಸಲಾಯಿತು.
ವಿಚಾರಣೆ ವೇಳೆ ಹಾಜರಿದ್ದ ಹಂಸಲೇಖ ಪರ ವಕೀಲ ಸಿ.ಎಸ್.ದ್ವಾರಕಾನಾಥ್, ಪೊಲೀಸರು ವಿಚಾರಣೆಗೆ ಕರೆದರೆ ಮತ್ತೆ ಬರಬೇಕು ಎಂದು ಹೇಳಿದ್ದಾರೆ. ನಾವು ಕಾನೂನಿನ ಹಾದಿಯಲ್ಲಿಯೇ ನಡೆಯುತ್ತೇವೆ, ಕಾನೂನು ಗೌರವಿಸುತ್ತೇವೆ ಎಂದು ಹೇಳಿದರು. ವಿಚಾರಣೆ ಮುಕ್ತಾಯವಾದ ಬಳಿಕ ಹಂಸಲೇಖ ಠಾಣೆಯಿಂದ ಹೊರ ನಡೆದರು.
ಬಸವನಗುಡಿ ಠಾಣೆಯಲ್ಲಿ ಹಂಸಲೇಖ ವಿಚಾರಣೆ ನಡೆಯುತ್ತಿದ್ದ ಸಂದರ್ಭ ಪೊಲೀಸ್ ಠಾಣೆಯ ಎದುರು ಹಂಸಲೇಖ ಪರ-ವಿರೋಧದ ಘೋಷಣೆಗಳು ಮೊಳಗಿದವರು. ಪ್ರತಿಭಟನಾಕಾರರು ಠಾಣೆ ಆವರಣಕ್ಕೆ ಬಾರದಂತೆ ತಡೆಯಲು ಪೊಲೀಸರು ಬ್ಯಾರಿಕೇಡ್ ಹಾಕಿದ್ದರು. ಠಾಣೆ ಬಳಿ ಆಗಮಿಸಿದ ನಟ ಚೇತನ್, ರಸ್ತೆಯಲ್ಲೇ ಕುಳಿತರು. ಸುಮಾರು 1 ಗಂಟೆಗಳ ಕಾಲ ಹಂಸಲೇಖ ವಿಚಾರಣೆ ನಡೆಯಿತು.

ಪ್ರಮುಖ ಸುದ್ದಿ :-   ಕಾಂಗ್ರೆಸ್‌ ಆಡಳಿತ ಬಂದ ನಂತರ ಅಪರಾಧಗಳು ಹೆಚ್ಚಳ, ವಿಧಾನಸೌಧದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ.. ಕಾಂಗ್ರೆಸ್‌ ಅನ್ನು ತಿರಸ್ಕರಿಸಬೇಡವೇ : ಶಿರಸಿಯಲ್ಲಿ ಮತದಾರರಿಗೆ ಮೋದಿ ಪ್ರಶ್ನೆ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement