ಭಾರತದಲ್ಲಿ 9,119 ಹೊಸದಾಗಿ ಕೋವಿಡ್‌ ಪ್ರಕರಣಗಳು ದಾಖಲು

ನವದೆಹಲಿ: ಭಾರತದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 9,119 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 396 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,45,44,882ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,66,980ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಇದೇ ಸಮಯದಲ್ಲಿ 10,264 ಜನರು ಸೋಂಕಿನಿಂದ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,39,67,962ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,09,940ಕ್ಕೆ ಕುಸಿದಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,19,38,44,741 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ

0 / 5. 0

ಪ್ರಮುಖ ಸುದ್ದಿ :-   ವೀಡಿಯೊ...| ಹುಲಿ-ಕರಡಿ ಮಧ್ಯೆ "ಅಪರೂಪದ" ಮುಖಾಮುಖಿ; ಆಕ್ರಮಣಕಾರಿ ಕರಡಿಗೆ ಹುಲಿಯ ತಣ್ಣನೆಯ ಉತ್ತರ | ವೀಕ್ಷಿಸಿ

ನಿಮ್ಮ ಕಾಮೆಂಟ್ ಬರೆಯಿರಿ

advertisement