ಭಾರತದಲ್ಲಿ 9,119 ಹೊಸದಾಗಿ ಕೋವಿಡ್‌ ಪ್ರಕರಣಗಳು ದಾಖಲು

ನವದೆಹಲಿ: ಭಾರತದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 9,119 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 396 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,45,44,882ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,66,980ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಇದೇ … Continued

ಮೇಘಾಲಯದಲ್ಲಿ ಕಾಂಗ್ರೆಸ್‌ಗೆ ಆಘಾತ: ಮಾಜಿ ಸಿಎಂ ಮುಕುಲ್ ಸಂಗ್ಮಾ ಸೇರಿ 12 ಶಾಸಕರು ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆ..!

ನವದೆಹಲಿ: ಮೇಘಾಲಯದಲ್ಲಿ ನಡೆದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಭಾರೀ ಆಘಾತವಾಗಿದೆ. ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಸೇರಿದಂತೆ 18 ಕಾಂಗ್ರೆಸ್ ಶಾಸಕರ ಪೈಕಿ 12 ಶಾಸಕರು ತೃಣಮೂಲ ಕಾಂಗ್ರೆಸ್ ಸೇರಿದ್ದಾರೆ. ಹೀಗಾಗಿ ಮೇಘಾಲಯದಲ್ಲಿ ತೃಣಮೂಲ ಕಾಂಗ್ರೆಸ್ ಪ್ರಮುಖ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ. ಮೂಲಗಳ ಪ್ರಕಾರ, ಈ ಎಲ್ಲಾ ಶಾಸಕರು ಶಿಲ್ಲಾಂಗ್‌ನಲ್ಲಿ ಟಿಎಂಸಿ ಸೇರಿದರು. ವಿನ್ಸೆಂಟ್ ಎಚ್. ಪಾಲಾ … Continued

ನಾಳೆಯಿಂದ ಕರ್ನಾಟಕದಲ್ಲಿ 3 ದಿನ ಮತ್ತೆ ಭಾರೀ ಮಳೆ ಸಾಧ್ಯತೆ:ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಸ್ವಲ್ಪ ವಿರಾಮ ನೀಡಿತ್ತು. ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ನವೆಂಬರ್ 26ರಿಂದ ರಾಜ್ಯದಲ್ಲಿ ಮತ್ತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದು ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ, ಹಾಸನ. ದಾವಣಗೆರೆ, ಚಿಕ್ಕಬಳ್ಳಾಪುರ, ಮೈಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ. … Continued

ಕುಮಟಾ ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯಕ್ಕೆ ಬಿ ಪ್ಲಸ್ ನ್ಯಾಕ್ ಮಾನ್ಯತೆ

ಕುಮಟಾ; ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ.ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯಕ್ಕೆ ನವೆಂಬರ್ ೧೮ ಮತ್ತು ೧೯ ರಂದು ನ್ಯಾಕ್ ಸಮೀತಿ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದ್ದು, ಕಾಲೇಜು ಬಿ ಪ್ಲಸ್‌ ನ್ಯಾಕ್ ಶ್ರೇಣಿ ಉನ್ನತಿ ಪಡೆದುಕೊಂಡಿದೆ. ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗಿನ ಚರ್ಚೆ, ಆಡಳಿತ ಮಂಡಳಿಯೊಂದಿಗಿನ ಸಭೆ, ಪೂರ್ವ ವಿದ್ಯಾರ್ಥಿಗಳೊಂದಿಗಿನ ಸಂಭಾಷಣೆ ನಡೆಸಿ ನ್ಯಾಕ್ ಸಮಿತಿ ಮೆಚ್ಚುಗೆ … Continued

ಕಾನೂನು ಪದವಿ ಸೆಮಿಸ್ಟರ್ ಪರೀಕ್ಷೆ ನಡೆಸಲು ಕೆಎಸ್‌ಎಲ್‌ಯುಗೆ ಹೈಕೋರ್ಟ್‌ನಿಂದ ಅನುಮತಿ

ಬೆಂಗಳೂರು: ಕಾನೂನು ಪದವಿ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಕಾನೂನು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ಪರೀಕ್ಷೆಗಳಿಗೆ ತಡೆ ನೀಡಿ ಏಕಸದಸ್ಯ ನ್ಯಾಯಪೀಠ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕರ್ನಾಟಕ ಕಾನೂನು ವಿವಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಪರೀಕ್ಷೆಗಳಿಗೆ ಅನುಮತಿಸಿ ಮಧ್ಯಂತರ ಆದೇಶ ನೀಡಿದೆ. … Continued

ತಮ್ಮ ಅನಾರೋಗ್ಯದ ವದಂತಿಗಳಿಗೆ ಪತ್ರದ ಮುಖೇನ ಉತ್ತರಕೊಟ್ಟ ಹಂಸಲೇಖ

ಬೆಂಗಳೂರು: ಪೇಜಾವರ ಶ್ರೀಗಳ ಬಗ್ಗೆ ಹಗುರವಾಗಿ ಮಾತನಾಡಿ, ಅನೇಕರ ಆಕ್ರೋಶಕ್ಕೆ ಕಾರಣವಾಗಿದ್ದ ಸಂಗೀತ ನಿರ್ದೇಶಕ ಹಂಸಲೇಖ ಆರೋಗ್ಯದ ಬಗ್ಗೆ ವದಂತಿಗಳು ಹರಿದಾಡಲು ಆರಂಭಿಸಿದ್ದಕ್ಕೆ ಹಂಸಲೇಖ ತೆರೆ ಎಳೆದಿದ್ದಾರೆ. ವರದಂತಿಗಳಿಗೆ ಹಂಸಲೇಖ ಪತ್ರ ಬರೆದು ಉತ್ತರ ನೀಡಿದ್ದಾರೆ. ಇತ್ತೀಚಿಗೆ ಸನ್ಮಾನ ಸಮಾರಂಭವೊಂದರಲ್ಲಿ ಹಂಸಲೇಖ ಆಡಿದ ಮಾತು ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೇ ಮಾತಿನ ಭರದಲ್ಲಿ ಹಂಸಲೇಖ ಪೇಜಾವರ ಶ್ರೀಗಳ … Continued