ಹೊಸ ತಳಿಗಳ ಕೊರೊನಾ ಪ್ರಕರಣಗಳು ಪತ್ತೆ: ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲು ಸೂಚನೆ

ಬೆಂಗಳೂರು: ಕೊರೊನಾ ವೈರಸ್​ನ B.1.1.529 ಹೊಸ ತಳಿಯ ಪ್ರಕರಣಗಳು ವಿದೇಶಗಳಲ್ಲಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಹೊಸ ತಳಿ ವೇಗವಾಗಿ ಹರಡಲಿದೆ ಎಂದು ತಜ್ಞರಿಂದ ಎಚ್ಚರಿಕೆ ಹಾಗೂ ವ್ಯಾಕ್ಸಿನ್ ಪ್ರೊಟೆಕ್ಷನ್ ಮೀರಿ ಸೋಂಕು ತೀವ್ರತೆ ಬಗ್ಗೆ ಎಚ್ಚರಿಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಎಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ ಕೊಟ್ಟಿದೆ.
ಬೋಟ್ಸ್ವಾನಾದಲ್ಲಿ 3, ದಕ್ಷಿಣ ಆಫ್ರಿಕಾದಲ್ಲಿ 6 ಹೊಸ ಕೊವಿಡ್19 ತಳಿಯ ಕೇಸ್‌ಗಳು​ ಪತ್ತೆ ಆಗಿವೆ. ಹಾಂಗ್​ಕಾಂಗ್‌ನಲ್ಲಿ ಹೊಸ ತಳಿಯ 1 ಕೇಸ್ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಮೂರು ದೇಶಗಳಿಂದ ಕರ್ನಾಟಕ ರಾಜ್ಯಕ್ಕೆ ಬರುವವರಿಗೆ ಟೆಸ್ಟ್‌ ಕಡ್ಡಾಯ ಮಾಡಲಾಗಿದೆ.
ಭಾರತದಲ್ಲಿ ಇಲ್ಲಿಯವರೆಗೆ ಯಾವುದೇ ಹೊಸ ಕೊವಿಡ್ ರೂಪಾಂತರದ ಪ್ರಕರಣ ಪತ್ತೆಯಾಗಿಲ್ಲ. ದಕ್ಷಿಣ ಆಫ್ರಿಕಾದ ವಿಜ್ಞಾನಿಗಳು ಬಿ.1.1.529 (B.1.1.529) ಎಂದು ಗುರುತಿಸಲಾದ ಕೊರೊನಾವೈರಸ್‌ನ (Coronavirus) ಹೊಸ ರೂಪಾಂತರವನ್ನು ಪತ್ತೆಹಚ್ಚಿರುವುದಾಗಿ ಘೋಷಿಸಿದ ನಂತರ, ದಕ್ಷಿಣ ಆಫ್ರಿಕಾ ಮತ್ತು ಇತರ ದೇಶಗಳು ಅಂತರಾಷ್ಟ್ರೀಯ ಪ್ರಯಾಣಿಕರನ್ನು ಕಠಿಣವಾಗಿ ಪರೀಕ್ಷಿಸಲು ಮತ್ತು ಪರೀಕ್ಷಿಸಲು ಕೇಂದ್ರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆಯನ್ನು ನೀಡಿತು.

ಪ್ರಮುಖ ಸುದ್ದಿ :-   ಮಾರ್ಚ್‌ 31ರೊಳಗೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಬದಲಾವಣೆ ಮಾಡಿ : ಬಿಜೆಪಿ ಹೈಕಮಾಂಡಿಗೆ ಮಠಾಧೀಶರ ಗಡುವು

 

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement