ಮಂಗಳೂರು : ಮಹಿಳೆ ಸಿಬ್ಬಂದಿ ಜೊತೆ ವೈದ್ಯಾಧಿಕಾರಿ ಅಸಭ್ಯ ವರ್ತನೆ ;ವಿಡಿಯೋ ವೈರಲ್

ಮಂಗಳೂರು : ವೈದ್ಯಾಧಿಕಾರಿಯಾಗಿದ್ದ ಡಾ. ರತ್ನಾಕರ್ ಅವರು ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ ತೋರಿದ ವಿಡಿಯೋಗಳು ಈಗ ವೈರಲ್ ಆಗುತ್ತಿವೆ.
ಆಯುಷ್ಮಾನ್ ನೋಡೆಲ್ ಆಫೀಸರ್ ಹಾಗೂ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿಡಾ.ರತ್ನಾಕರ್ ವಿರುದ್ಧ ಕೆಲ ತಿಂಗಳ ಹಿಂದೆ ದೂರು ಬಂದಿದ್ದು ಈ ಬಗ್ಗೆ ಆರೋಗ್ಯ ಇಲಾಖೆಯ ಆಂತರಿಕ ಸಮಿತಿ ಹಾಗೂ ಜಿಲ್ಲಾ ಮಟ್ಟದ ದೂರು ಸಮಿತಿಯಿಂದಲೂ ತನಿಖೆ ನಡೆಸಲಾಗಿತ್ತು. ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಹಿನ್ನಲೆ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಡಾ. ರತ್ನಾಕರ್ ವಿರುದ್ಧ ಕಳೆದ ಕೆಲ ತಿಂಗಳ ಹಿಂದೆ ಜಿಲ್ಲಾಧಿಕಾರಿಗೂ ದೂರು ಸಲ್ಲಿಕೆಯಾಗಿತ್ತು. ಕಚೇರಿಯ ಮಹಿಳಾ ಸಿಬ್ಬಂದಿ ಮಹಿಳಾ ಆಂತರಿಕ ದೂರು ಸಮಿತಿಗೆ ದೂರು ನೀಡಿದ್ದರು, ತನಿಖೆ ನಡೆಸಿದ ಸಮಿತಿ ಲೈಂಗಿಕ‌ ಕಿರುಕುಳ ಅಧಿನಿಯಮ 2013, ಕರ್ನಾಟಕ ನಾಗರಿಕ ಸೇವಾ ನಿಯಮ 1957 ರನ್ವರ ಅಮಾನತು ಮಾಡಲು ವರದಿ ಸರಕಾರಕ್ಕೆ ಸಲ್ಲಿಸಲಾಗಿತ್ತು. ಈ ಹಿನ್ನಲೆಯಲ್ಲಿ ನವೆಂಬರ್ 8 ರಂದು ಅಮಾನತು ಮಾಡಲಾಗಿತ್ತು.
ಪ್ರಾಥಮಿಕ ಹಂತದ ತನಿಖೆಯ ವೇಳೆ ತಪ್ಪೆಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವುದರಿಂದ ಈ ಬಗ್ಗೆ ಸರ್ಕಾರಕ್ಕೂ ವರದಿಯನ್ನು ಸಲ್ಲಿಸಲಾಗಿತ್ತು. ಆ ಪ್ರಕಾರ ಅವರನ್ನು ಕರ್ತವ್ಯದಿಂದ ಅಮಾನತಿನಲ್ಲಿರಸಲು ಆದೇಶವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ತಿಳಿಸಿದ್ದಾರೆ.
ಡಾ. ರತ್ನಾಕರ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮ ಅಧಿಕಾರಿಯಾಗಿದ್ದು ಅವರನ್ನು ಕಳೆದ ನವೆಂಬರ್‌ 8 ರಿಂದ ಅಮಾನತಿನಲ್ಲಿದ್ದಾರೆ. ಆರೋಗ್ಯ ಇಲಾಖೆಯ ವತಿಯಿಂದ ಇಲಾಖಾ ತನಿಖೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕಚೇರಿಯಲ್ಲೇ ಮಹಿಳಾ ಸಿಬ್ಬಂದಿಗಳೊಂದಿಗೆ ಅಶ್ಲೀಲವಾಗಿ ವರ್ತಿಸಿದ ವಿಡಿಯೋಗಳು ಸಾಮಾಜಿಕ ತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ

ಪ್ರಮುಖ ಸುದ್ದಿ :-   ವೀಡಿಯೊ..| ಕುಮಟಾ : ಅಘನಾಶಿನಿ ನದಿಗೆ ಅಡ್ಡವಾಗಿ ನಿರ್ಮಾಣವಾಗುತ್ತಿದ್ದ ಸೇತುವೆಯ ಸ್ಲ್ಯಾಬ್‌ ಕುಸಿತ

5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement