ಹಲವು ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪ : ವೈದ್ಯಾಧಿಕಾರಿ ಡಾ.ರತ್ನಾಕರ್ ವಶಕ್ಕೆ

ಮಂಗಳೂರು: ಮಹಿಳಾ ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವೈದ್ಯಾಧಿಕಾರಿ ಡಾ. ರತ್ನಾಕರ್ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಡಾ. ರತ್ನಾಕರ್ ಮಹಿಳಾ ಸಹೋದ್ಯೋಗಿಗಳಿಗೆ ಕಿರುಕುಳ ನೀಡುತ್ತಿರುವ ವಿಡಿಯೋ ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆದ ನಂತರ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿತ್ತು.
ಸುದ್ದಿಗಾರರೊಂದಿಗೆ ಮಾತನಾಡಿದ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಶುಕ್ರವಾರ ಇಲ್ಲಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಡಾ.ರತ್ನಾಕರ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಅಧಿಕಾರಿಯಿಂದ ಕಿರುಕುಳಕ್ಕೊಳಗಾದ ಮಹಿಳೆಯರು ದೂರು ನೀಡಲು ನಿರಾಕರಿಸಿದ್ದು, ತನಿಖೆಯ ಸಮಯದಲ್ಲಿ ಮಹಿಳೆಯರು ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು.
ನವೆಂಬರ್ 8 ರಿಂದ ರತ್ನಾಕರ್ ಅವರನ್ನು ಅಮಾನತುಗೊಳಿಸಲಾಗಿದೆ ಆರೋಗ್ಯ ಇಲಾಖೆಯಿಂದ ಇಲಾಖಾ ತನಿಖೆ ನಡೆಸಲಾಗುತ್ತಿದೆ ಎಂದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement