ಬೆಂಗಳೂರು: ಕರ್ನಾಟಕದಲ್ಲಿ ಶೇ 40ರಷ್ಟು ಕಮಿಷನ್ ದಂಧೆ ಇದೆ ಎಂಬ ಗುತ್ತಿಗೆದಾರರ ಆರೋಪದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರಿಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ದೇಶನದ ಮೇರೆಗೆ ಈ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಮಿಷನ್ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಪತ್ರ ಬರೆದಿದ್ದರು. ಬೊಮ್ಮಾಯಿ ಅವರು ಮುಖ್ಯಮಂತ್ರಿ ಆದ ನಂತರ ನಡೆದ ಟೆಂಡರ್ ಪ್ರಕ್ರಿಯೆ ಮತ್ತು ₹ 10 ಕೋಟಿ ಅನುದಾನ ಮೀರಿದ ಎಲ್ಲ ಕಾಮಗಾರಿಗಳ ಟೆಂಡರ್ ಅಥವಾ ಬಿಲ್ ಮಂಜೂರು ವೇಳೆ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಮುಖ್ಯಕಾರ್ಯದರ್ಶಿ ಸೂಚನೆ ನೀಡಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ