40% ಕಮಿಷನ್​ ಬಗ್ಗೆ ಗುತ್ತಿಗೆದಾರರ ಆರೋಪ: ತನಿಖೆಗೆ ಮುಖ್ಯ ಕಾರ್ಯದರ್ಶಿ ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಶೇ 40ರಷ್ಟು ಕಮಿಷನ್ ದಂಧೆ ಇದೆ ಎಂಬ ಗುತ್ತಿಗೆದಾರರ ಆರೋಪ‌ದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿ ರವಿಕುಮಾರ್​ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರಿ​ಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ದೇಶನದ ಮೇರೆಗೆ ಈ​ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಮಿಷನ್​ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಪತ್ರ ಬರೆದಿದ್ದರು. ಬೊಮ್ಮಾಯಿ ಅವರು ಮುಖ್ಯಮಂತ್ರಿ ಆದ ನಂತರ ನಡೆದ ಟೆಂಡರ್ ಪ್ರಕ್ರಿಯೆ ಮತ್ತು ₹ 10 ಕೋಟಿ ಅನುದಾನ ಮೀರಿದ ಎಲ್ಲ ಕಾಮಗಾರಿಗಳ ಟೆಂಡರ್ ಅಥವಾ ಬಿಲ್ ಮಂಜೂರು ವೇಳೆ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಮುಖ್ಯಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

 

ನಿಮ್ಮ ಕಾಮೆಂಟ್ ಬರೆಯಿರಿ

advertisement