ಎಸ್ ಡಿಎಂನ ಎಲ್ಲ ಕೋವಿಡ್ ಸಂಪರ್ಕಿತರ ತಪಾಸಣೆ ಪೂರ್ಣ: ಮತ್ತೆ 25 ಜನರಿಗೆ ದೃಢ

ಧಾರವಾಡ: ಸತ್ತೂರಿನ ಎಸ್ ಡಿ ಎಂ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಶನಿವಾರ ಕೋವಿಡ್ ತಪಾಸಣೆಗೆ ಒಳಗಾಗಿದ್ದ 2217 ಜನರ ಕೋವಿಡ್ ತಪಾಸಣಾ ವರದಿಗಳು ಲಭ್ಯವಾಗಿದ್ದು ,ಇವರಲ್ಲಿ 25 ಜನರಿಗೆ ಮಾತ್ರ ಕೋವಿಡ್ ಸೋಂಕು ದೃಢವಾಗಿದೆ , ಪಾಸಿಟಿವಿಟಿ ದರ ಶೇ.1.12 ರಷ್ಟಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಕಳೆದ ಮೂರು ದಿನಗಳ ಅವಧಿಯಲ್ಲಿ ತಪಾಸಣೆ ಮಾಡಲಾಗಿದ್ದ 1756 ಜನರಲ್ಲಿ 281 ಜನರಲ್ಲಿ ಸೋಂಕು ದೃಢಪಟ್ಟು ಪಾಸಿಟಿವಿಟಿ ದರ ಶೇ.16 ಕ್ಕೇರಿತ್ತು.
ಶುಕ್ರವಾರ ಮತ್ತು ಶನಿವಾರ ಸ್ವ್ಯಾಬ್ ಸಂಗ್ರಹಿಸಿದ್ದ 2217 ಜನರಲ್ಲಿ ಕೇವಲ 25 ವ್ಯಕ್ತಿಗಳಲ್ಲಿ ಮಾತ್ರ ಸೋಂಕು ಕಂಡು ಬಂದಿದೆ ಪಾಸಿಟಿವಿಟಿ ದರ ಶೇ.1.12 ಇದೆ. ಎಸ್ ಡಿ ಎಂ‌ ಆವರಣದ ವಿದ್ಯಾರ್ಥಿಗಳು, ವೈದ್ಯರು, ಸಿಬ್ಬಂದಿ, ರೋಗಿಗಳು, ಸಹಾಯಕರು ಸೇರಿ ಒಟ್ಟು 3973 ತಪಾಸಣೆಯಿಂದ 306 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ಎಸ್ ಡಿ ಎಂ ಆವರಣದ ವಿದ್ಯಾರ್ಥಿಗಳು, ವೈದ್ಯರು ಹಾಗೂ ಸಿಬ್ಬಂದಿ ವರ್ಗದ ಕೆಲವರಲ್ಲಿಯೇ ಈ ಸೋಂಕು ಸೀಮಿತವಾಗಿದೆ. ರೋಗಿಗಳು, ಅವರ ಆರೈಕೆದಾರರಲ್ಲಿ ಈ ಸೋಂಕು ವ್ಯಾಪಿಸಿಲ್ಲ. ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸರು, ಎಸ್ ಡಿ ಎಂ ಆಡಳಿತ ಮಂಡಳಿ ಬಿಗಿಕ್ರಮಗಳನ್ನು ಮುಂದುವರೆಸಲಿವೆ ಎಂದು ಅವರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement