ಕೋವಿಡ್ ಹೊಸ ರೂಪಾಂತರ ಪತ್ತೆ, ಕರ್ನಾಟಕದಲ್ಲಿ ಕೊರೊನಾ ಹೆಚ್ಚಳ : ಸಿಎಂ ಸಭೆ ನಂತರ ರಾಜ್ಯದ ಜನರಿಗೆ ಹೊರಬಿತ್ತು ಸರ್ಕಾರದ ಮಹತ್ವದ ಸೂಚನೆಗಳು

ಬೆಂಗಳೂರು : ಕೋವಿಡ್ 19 , ರೂಪಾಂತರಿ ವೈರಸ್ ಒಮಿಕ್ರಾನ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಅನೇಕ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಹಾಗೂ ರಾಜ್ಯದ ಜನರಿಗೆ ಹಲವಾರು ಸೂಚನೆಗಳನ್ನು ನೀಡಲಾಗಿದೆ.
ಈ ಕುರಿತು ಮಾಧ್ಯಮದವರ ಜೊತೆಗೆ ಮಾತನಾಡಿದ ಕಂದಾಯ ಸಚಿವ ಆರ್, ಅಶೋಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸರ್ಕಾರ ಬ್ರೇಕ್ ಹಾಕಲಾಗಿದೆ. ಕೋವಿಡ್ ಇರುವ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮಕೊಳ್ಳಾಗುತ್ತಿದೆ. ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಜಿಲ್ಲಾವಾರು ಕೋವಿಡ್ ಪರಿಸ್ಥಿತಿ ಗಮನಿಸಿ ಕ್ರಮ ತೆಗೆದುಕೊಳ್ಳಬೇಕು. ಜನ ಗುಂಪು, ಗುಂಪು ಸೇರದಂತೆ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಮಾಸ್ಕ್ ಹಾಕದವರಿಗೆ ದಂಡ ಹಾಕಲು ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಮದುವೆ ಸಮಾರಂಭಗಳಿಗೆ ಸದ್ಯಕ್ಕೆ ಯಾವುದೇ ನಿರ್ಬಂಧ ಇಲ್ಲ, ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಸದ್ಯದಲ್ಲೇ ಪ್ರಕಟವಾಗಲಿದೆ. ಸೋಂಕಿನ ಸ್ವರೂಪದ ಬಗ್ಗೆ ಅಧ್ಯಯನ ನಡೆಸಲು ತಜ್ಞರಿಗೆ ಸೂಚನೆಯನ್ನು ನೀಡಲಾಗಿದೆ ಎಂದು ತಿಳಿಸಿದರು.

ಕೈಗೊಂಡ ಪ್ರಮುಖ ನಿರ್ಧಾರಗಳು ಹೀಗಿವೆ.

*ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ
* ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ ಆರ್.ಟಿ.ಪಿ.ಸಿ. ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯ.
*ಹೊಟೇಲ್‌, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಗೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳು, ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರಬೇಕು.
*ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು.
*ಕೊಡಗು, ದಕ್ಷಿಣ ಕನ್ನಡ, ಮೈಸೂರು ಮತ್ತು ಚಾಮರಾಜ ನಗರ ಗಡಿಗಳಲ್ಲಿ ಕಟ್ಟೆಚ್ಚರ , ತಪಾಸಣೆ ತೀವ್ರ .
* ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆ ಕೈಗೊಳ್ಳುವುದು
* ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಖಡಕ್‌ ಸೂಚನೆ. ಇದಕ್ಕೆ ಅವರು ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು.
* 16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಬೇಕು
* ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಬೇಕು.
*ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಪರೀಕ್ಷೆ ಕಡ್ಡಾಯ
*ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು. ಸರ್ಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸಬೇಕು
*ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ಮಾತ್ರ ನಗರ ಪ್ರವೇಶಕ್ಕೆ ಅನುಮತಿ.
* ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಬೇಕು.
* ಕಾಲೇಜುಗಳಲ್ಲಿ ಸಾಂಸ್ಕ್ರತಿಕ ಕಾರ್ಯಕ್ರಮ ಮುಂದೂಡಲು ಸಲಹೆ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement