ಗಡಿ ಭದ್ರತಾ ಪಡೆ ಅಧಿಕಾರ ವ್ಯಾಪ್ತಿ ನಿರ್ಧರಿಸುವ ಕೇಂದ್ರದ ಅಧಿಕಾರ ಪ್ರಶ್ನಿಸಿ ಕಲ್ಕತ್ತಾ ಹೈಕೋರ್ಟ್‌ನಲ್ಲಿ ಮನವಿ

ಕೋಲ್ಕತ್ತಾ: ಕೇಂದ್ರ ಸರ್ಕಾರಕ್ಕೆ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) ಪ್ರಾದೇಶಿಕ ವ್ಯಾಪ್ತಿಯನ್ನು ನಿರ್ಧರಿಸುವ ಅನಿರ್ಬಂಧಿತ ಅಧಿಕಾರಗಳನ್ನು ನೀಡುವ ಬಿಎಸ್‌ಎಫ್‌ ಕಾಯಿದೆ 1968ರ ಸೆಕ್ಷನ್‌ 139(1) ಅನ್ನು ಪ್ರಶ್ನಿಸಿ ಕೋಲ್ಕತ್ತಾ ಹೈಕೋರ್ಟ್‌ಗೆ ಮನವಿಯೊಂದು ಸಲ್ಲಿಕೆಯಾಗಿದೆ.
ಕೇಂದ್ರ ಗೃಹ ಇಲಾಖೆಯು ಗಡಿ ರಾಜ್ಯಗಳಲ್ಲಿ ಬಿಎಸ್‌ಎಫ್‌ ಪ್ರಾದೇಶಿಕ ವ್ಯಾಪ್ತಿಯನ್ನು 15 ಕಿಮೀಯಿಂದ 50 ಕಿಮೀ ಹೆಚ್ಚಿಸಿರುವ ಇತ್ತೀಚೆಗಿನ ನಿರ್ಧಾರವನ್ನು ವಕೀಲ ಸಯನ್‌ ಬ್ಯಾನರ್ಜಿ ಅವರು ಪ್ರಶ್ನಿಸಿದ್ದಾರೆ.
ಬಿಎಸ್‌ಎಫ್‌ ವ್ಯಾಪ್ತಿಯನ್ನು ಹೆಚ್ಚಿಸುವ ಅಧಿಸೂಚನೆಯನ್ನು ಅಕ್ಟೋಬರ್‌ 11ರಂದು ಕೇಂದ್ರ ಗೃಹ ಇಲಾಖೆ ಹೊರಡಿಸಿದೆ. ಇದರಿಂದ ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಪಂಜಾಬ್‌ನಲ್ಲಿ ಪರಿಣಾಮ ಉಂಟಾಗಲಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಮನವಿಯಲ್ಲಿ ಹೇಳಲಾಗಿದೆ.

0 / 5. 0

ಪ್ರಮುಖ ಸುದ್ದಿ :-   ಜನಾಂಗೀಯ ಕಾಮೆಂಟ್‌ ವಿವಾದದ ಬೆನ್ನಲ್ಲೇ ಇಂಡಿಯನ್‌ ಓವರ್‌ಸೀಸ್‌ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸ್ಯಾಮ್‌ ಪಿತ್ರೋಡಾ

ನಿಮ್ಮ ಕಾಮೆಂಟ್ ಬರೆಯಿರಿ

advertisement