ಧಾರವಾಡ: ಎಸ್‌ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಮತ್ತೆ77 ಜನರಲ್ಲಿ ಕೊರೊನಾ ಪತ್ತೆ, ಮೂರು ದಿನಗಳಲ್ಲಿ 281 ಜನರಿಗೆ ಸೋಂಕು..!

ಧಾರವಾಡ: ಇಲ್ಲಿನ ಎಸ್ ಡಿ ಎಂ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು ಇಂದು ಮತ್ತೆ 77 ಜನರಲ್ಲಿ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಅಲ್ಲದೆ 1822 ಜನರ ತಪಾಸಣಾ ವರದಿಗಳು ಬರಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ 204 ಜನರಲ್ಲಿ ಹಾಗೂ ಇಂದು 77 ಪ್ರಕರಣಗಳು ಸೇರಿ ಒಟ್ಟು 281 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಎಲ್ಲರಿಗೂ ಚಿಕಿತ್ಸೆ, ಔಷಧೋಪಚಾರ ನಡೆಯುತ್ತಿದೆ. ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗಿದೆ. ತಪಾಸಣೆಗೆ ಒಳಪಟ್ಟವರು ಪ್ರತ್ಯೇಕವಾಗಿ ಇರಲು ಸೂಚಿಸಲಾಗಿದೆ.
ಎಲ್ಲರ ಆರೋಗ್ಯ ಸ್ಥಿರ
ವರದಿಯಾಗಿರುವ 281 ಪ್ರಕರಣಗಳಲ್ಲಿ , ಕೇವಲ 6 ಜನರಲ್ಲಿ ಮಾತ್ರ ರೋಗದ ಸಾಮಾನ್ಯ ಲಕ್ಷಣಗಳಿವೆ (Mild Symptomatic). ಆದರೆ ಖಾಯಿಲೆ ತೀವ್ರ ತರವಾಗಿಲ್ಲ. ಉಳಿದ 275 ಜನರಲ್ಲಿ ರೋಗದ ಲಕ್ಷಣಗಳೂ ಇಲ್ಲ (Asymptomatic). ಯಾವುದೇ ಸಾವು ಸಂಭವಿಸಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.
ನವೆಂಬರ್‌ 17 ರಂದು ಕಾಲೇಜಿನ ಕಲಾಕ್ಷೇತ್ರದಲ್ಲಿ ಎಸ್‌ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕಾರ್ಯಕ್ರಮವೊಂದು ನಡೆದಿತ್ತು. ಇದರ ನಂತರ ಪ್ರಕರಣಗಳು ಸ್ಫೋಟಗೊಂಡಿವೆ. ಗುರುವಾರ 66 ಸೋಂಕು, ಶುಕ್ರವಾರ 138 ಹಾಗೂ ಇಂದು, ಶನಿವಾರ ಬೆಳಿಗ್ಗೆ 77 ಸೋಂಕುಗಳು ವರದಿಯಾಗಿವೆ.

ಪ್ರಮುಖ ಸುದ್ದಿ :-   ನಾಪತ್ತೆಯಾಗಿದ್ದ ಗದಗ ಕೆಆರ್‌ಐಡಿಎಲ್ ಎಇಇ 40 ದಿನಗಳ ನಂತರ ಮುಂಬೈನಲ್ಲಿ ಪತ್ತೆ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement