ನವೆಂಬರ್‌ 29ರ ಉದ್ದೇಶಿತ ಟ್ರ್ಯಾಕ್ಟರ್ ರ್ಯಾಲಿ ಹಿಂಪಡೆದ ಕಿಸಾನ್ ಯೂನಿಯನ್: ಡಿಸೆಂಬರ್‌ 4ಕ್ಕೆ ತಮ್ಮ ಮುಂದಿನ ಕ್ರಮ ಪ್ರಕಟ

ನವದೆಹಲಿ: ಸದ್ಯಕ್ಕೆ ದೆಹಲಿಯಲ್ಲಿ ಉದ್ದೇಶಿತ ಟ್ರಾಕ್ಟರ್ ರ್ಯಾಲಿ ಕೈಬಿಡಲು ಸಿಂಘು ಗಡಿಯಲ್ಲಿ ನಡೆದ ರೈತರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾದ (ಎಸ್‌ಕೆಎಂ) ಕೋರ್ ಕಮಿಟಿಯು ಡಿಸೆಂಬರ್ 4 ರಂದು ತಮ್ಮ ಮುಂದಿನ ಕ್ರಮವನ್ನು ಪ್ರಕಟಿಸುವುದಾಗಿ ಶನಿವಾರ ತಿಳಿಸಿದೆ.
ನವಂಬರ್ 29 ರಂದು ನಡೆಸಲು ಉದ್ದೇಶಿಸಿದ್ದ ಟ್ರಾಕ್ಟರ್ ರ್ಯಾಲಿ ರದ್ದುಗೊಳಿಸಲಾಗಿದೆ ಎಂದು ಕಿಸಾನ್ ಯೂನಿಯನ್ ಹೇಳಿಕೆ ನೀಡಿದೆ. ನವೆಂಬರ್ 29ರಂದು ಟ್ರ್ಯಾಕ್ಟರ್ ರ್ಯಾಲಿ ನಡೆಯುವುದಿಲ್ಲ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆ ನೀಡಿದೆ.
ಇಂದು (ನವೆಂಬರ್ 27) ಸುದ್ದಿಗೋಷ್ಠಿ ನಡೆಸಿದ ದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಈ ಬಗ್ಗೆ ಮಾಹಿತಿ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದೆ. ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನು ಸಂಬಂಧ ಸಮಿತಿ ರಚಿಸಬೇಕು ಎಂಬಿತ್ಯಾದಿ ಬೇಡಿಕೆಗಳು ಸೇರಿದಂತೆ ನಮ್ಮ ಬೇಡಿಕೆಗಳ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯಲಾಗಿದೆ. ಡಿಸೆಂಬರ್ 4ರ ವರೆಗೆ ಪ್ರಧಾನಿ ಅವರಿಗೆ ಉತ್ತರಿಸಲು ಸಮಯ ನೀಡಿದ್ದೇವೆ. ಟ್ರ್ಯಾಕ್ಟರ್ ರಾಲಿಯನ್ನು ನಿಜವಾಗಿ ಹಿಂಪಡೆದಿಲ್ಲ, ಸ್ಥಗಿತಗೊಳಿಸಿದ್ದೇವೆ. ಡಿಸೆಂಬರ್ 4 ರಂದು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ನಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ನಡೆಸುತ್ತೇವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.
ಮೂರು ಕೃಷಿ ಕಾಯ್ದೆ(Farm Laws) ಗಳನ್ನು ವಾಪಸ್​ ಪಡೆಯುವ ಮಸೂದೆ ಸೋಮವಾರ ಸಂಸತ್ತಿನಲ್ಲಿ ಮಂಡನೆಯಾಗಲಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್​ ತೋಮರ್ ಮಂಡನೆ ಮಾಡಲಿದ್ದಾರೆ. ಅಂದು ಕಡ್ಡಾಯವಾಗಿ ಬಿಜೆಪಿ ಸಂಸದರು ಲೋಕಸಭೆಯಲ್ಲಿ ಹಾಜರಿರಲೇಬೇಕು ಎಂದು ವಿಪ್​ ಜಾರಿ ಮಾಡಲಾಗಿದೆ. ಕಾಂಗ್ರೆಸ್ ಸಹ ತನ್ನ ಸಂಸದರಿಗೆ ಮೂರು ಸಾಲಿನ ವಿಪ್​ ಜಾರಿ ಮಾಡಿದೆ.
ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಇನ್ನೆರಡು ದಿನಗಳು ಮಾತ್ರ ಬಾಕಿ ಇದೆ. ಮೂರು ಕೃಷಿ ಕಾಯ್ದೆಗಳ ರದ್ದತಿ ಮಸೂದೆಯನ್ನೂ ಅಧಿವೇಶನದ ಇತರ 26 ಕಾರ್ಯಸೂಚಿಯೊಂದಿಗೆ ಕೇಂದ್ರ ಸರ್ಕಾರ ಸೇರಿಸಿದೆ. ಈ ಕೃಷಿ ಕಾಯ್ದೆಗಳನ್ನು ಕಳೆದ ವರ್ಷದ ಮುಂಗಾರು ಅಧಿವೇಶನದಲ್ಲಿ ಅಂಗೀಕಾರ ಮಾಡಲಾಗಿತ್ತು. ಆದರೆ ಕೃಷಿ ಮಸೂದೆಗಳು ಪಾಸ್ ಆಗಿ ಕಾಯ್ದೆಯಾಗಿ ರೂಪುಗೊಂಡಾಗಿನಿಂದಲೂ ರೈತರು ಸಿಕ್ಕಾಪಟೆ ಪ್ರತಿಭಟನೆ ಮಾಡುತ್ತಲೇ ಇದ್ದರು. ಕಳೆದೊಂದು ವರ್ಷದಿಂದಲೂ ದೆಹಲಿಯ ಗಡಿಭಾಗಗಳಲ್ಲಿ ರೈತರ ಹೋರಾಟ ನಡೆದಿತ್ತು.

ಪ್ರಮುಖ ಸುದ್ದಿ :-   'ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ನಮ್ಮ ಆರ್ಥಿಕತೆ ಬೆಂಬಲಿಸಿ' : ಹದಗೆಟ್ಟ ಸಂಬಂಧಗಳ ಮಧ್ಯೆ ಭಾರತದ ಪ್ರವಾಸಿಗರಿಗೆ ಮನವಿ ಮಾಡಿದ ಮಾಲ್ಡೀವ್ಸ್ ಸರ್ಕಾರ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement