ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 30% ಅರಣ್ಯ ನಿರ್ಮಿಸಿ: ಅಧಿಕಾರಿಗಳಿಗೆ ಸಚಿವ ಉಮೇಶ್ ಕತ್ತಿ ಸೂಚನೆ

ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಶೇ. 30ರಷ್ಟು ಅರಣ್ಯ ನಿರ್ಮಾಣ ಮಾಡಬೇಕು ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಯಾವ ಜಿಲ್ಲೆಯಲ್ಲಿ ಅರಣ್ಯ ನಿರ್ಮಾಣ ಮಾಡಲು ಭೂಮಿ ಇಲ್ಲವೋ, ಆ ಜಿಲ್ಲೆಯಲ್ಲಿನ ಕಂದಾಯ ಇಲಾಖೆ, ಜಲಸಂಪನ್ಮೂಲ ಇಲಾಖೆ ಸೇರಿ ಬೇರೆ ಇಲಾಖೆಗೆ ಒಳಪಡುವ ಭೂಮಿಯನ್ನು ಅರಣ್ಯ ಇಲಾಖೆಗೆ ವಿಲೀನ ಮಾಡದೆ, ಆ ಭೂಮಿಯಲ್ಲಿ ಅರಣ್ಯ ಇಲಾಖೆಯ ಸಹಯೋಗದಿಂದ ಸುಂದರವಾದ ಗಿಡ ಮರಗಳನ್ನು ಬೆಳೆಸಿ ಎಂದು ಉಮೇಶ್ ಕತ್ತಿಯವರು ರಾಜ್ಯದ ಎಲ್ಲ ಅರಣ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ದಕ್ಷಿಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಶೇಕಡಾ 70ರಷ್ಟು ಅರಣ್ಯ ಇದೆ‌. ಆದರೆ ವಿಜಯಪುರ, ಬೀದರ್, ಕಲಬುರಗಿ ಸೇರಿದಂತೆ ಅನೇಕ ಜಿಲ್ಲೆಯಲ್ಲಿ ಶೇ. 10ಕ್ಕಿಂತಲೂ ಕಡಿಮೆ ಅರಣ್ಯ ಭೂಮಿ ಇದೆ ಎಂದು ಉಮೇಶ್‌ ಕತ್ತಿ ಕಳವಳ ವ್ಯಕ್ತಪಡಿಸಿದ್ದಾರೆ.
ಕಡಿಮೆ ಅರಣ್ಯ ಇರುವ ಜಿಲ್ಲೆಗಳಲ್ಲಿ ತಾಪಮಾನ ವೈಪರೀತ್ಯ ಸಮಸ್ಯೆಗಳು ಆಗುತ್ತಿವೆ. ಹೀಗಾಗಿ ಅರಣ್ಯ ಇಲಾಖೆಯವರು ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಅವರು ಹೇಳಿದ್ದಾರೆ.
ಒಂದು ಕಡೆ ನಮಗೆ ಗೊತ್ತಿಲ್ಲದೆ ಮರ-ಗಿಡಗಳ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದ್ದು, ಪರಿಣಾಮ ಶುದ್ಧ ಗಾಳಿ ಕೊರತೆಯಾಗುತ್ತಿದೆ. ಈಗ ನಮ್ಮ ಯುವಕರು ನೋಡುತ್ತಿರುವ ಸುಂದರವಾದ ಅರಣ್ಯ, ಗಿಡ-ಮರಗಳನ್ನು, ನಮ್ಮ ಮುಂದಿನ ಪೀಳಿಗೆ ನೋಡುವಂತಾಗಬೇಕು. ಕೇವಲ ಇರುವ ಅರಣ್ಯ ಭೂಮಿ ರಕ್ಷಣೆ ಮಾಡಿದರೆ ಸಾಲದು, ಅರಣ್ಯ ಭೂಮಿ ವೃದ್ಧಿಸುವ ಕಡೆಗೂ ಗಮನ ಹರಿಸಬೇಕಾಗಿದೆ ಎಂದು ಅವರು ಸೂಚನೆ ನೀಡಿದ್ದಾರೆ.

ಪ್ರಮುಖ ಸುದ್ದಿ :-   ನನ್ನ ಬ್ಲ್ಯಾಕ್‌ಮೇಲ್ ಮಾಡಲು ಯತ್ನ ; ಇಬ್ಬರ ಪಾತ್ರದ ಬಗ್ಗೆ ತನಿಖೆ : ಸ್ಟಿಂಗ್‌ ಬಗ್ಗೆ ಮೌನ ಮುರಿದ ಸಿದ್ದರಾಮಯ್ಯ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement