ಶಾಲಾ-ಕಾಲೇಜುಗಳಲ್ಲಿ ಕೋವಿಡ್ ಉಲ್ಬಣ: ಇಂದು ಸಂಜೆ ಸಿಎಂ ಮಹತ್ವದ ಸಭೆ

ಬೆಂಗಳೂರು: ಧಾರವಾಡ, ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ‌ ಶಾಲೆಗಳಲ್ಲಿ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ಬಗ್ಗೆ ಇಂದು (ಶನಿವಾರ) ಸಂಜೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಕೋವಿಡ್ ತಜ್ಞರು ಇರುತ್ತಾರೆ. ಹೊಸ ತಳಿ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಸಭೆಯಲ್ಲಿ ಚರ್ಚೆಯಾದ ಬಳಿಕ ಕೈಗೊಳ್ಳುವ ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿಸಲಾಗುವುದು ಎಂದು ಮಾಹಿತಿ ನೀಡಿದರು.
ಕಲ್ಬುರ್ಗಿ ಆಯುಕ್ತ ಸ್ನೇಹಲ್ ಕಂಡೇಲ್ ವಿರುದ್ಧ ಯುವತಿ ದೂರು ನೀಡಿದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಈ ಬಗ್ಗೆ ಕಚೇರಿಗೆ ಹೋದ ನಂತರ ವಿಚಾರ-ವಿಮರ್ಶೆ ಮಾಡಲಾಗುವುದು. ಯುವತಿ ದೂರು ಏನು ಎಂಬುದರ ಬಗ್ಗೆ ಗಮನಿಸುತ್ತೇನೆ ಎಂದರು.

3.5 / 5. 2

ಪ್ರಮುಖ ಸುದ್ದಿ :-   ನನ್ನ ಬ್ಲ್ಯಾಕ್‌ಮೇಲ್ ಮಾಡಲು ಯತ್ನ ; ಇಬ್ಬರ ಪಾತ್ರದ ಬಗ್ಗೆ ತನಿಖೆ : ಸ್ಟಿಂಗ್‌ ಬಗ್ಗೆ ಮೌನ ಮುರಿದ ಸಿದ್ದರಾಮಯ್ಯ

ನಿಮ್ಮ ಕಾಮೆಂಟ್ ಬರೆಯಿರಿ

advertisement