ಬೆಂಗಳೂರು: ವಿದೇಶಗಳಲ್ಲಿ ಹೊಸ ತಳಿಯ ಓಮಿಕ್ರಾನ್ ವೈರಸ್ ಪತ್ತೆ ಹಿನ್ನೆಲೆ ಮೂರು ದೇಶಗಳಿಂದ ರಾಜ್ಯಕ್ಕೆ ಬರುವವರಿಗೆ ಆರ್ ಟಿ -ಪಿಸಿಆರ್ (RTPCR) ಟೆಸ್ಟ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ದಕ್ಷಿಣ ಆಫ್ರಿಕಾ, ಹಾಂಕಾಂಗ್, ಬೋಟ್ಸ್ವಾನಾದಿಂದ ಬರುವವರಿಗೆ ಆರ್ ಟಿ -ಪಿಸಿಆರ್ ಟೆಸ್ಟ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ.
15 ದಿನಗಳ ಹಿಂದೆ ರಾಜ್ಯಕ್ಕೆ ಬಂದಿರುವವರನ್ನೂ ಪತ್ತೆ ಹಚ್ಚಬೇಕು. ಪತ್ತೆ ಹಚ್ಚಿ ಕಡ್ಡಾಯವಾಗಿ ಆರ್ಟಿಪಿಸಿಆರ್ ಟೆಸ್ಟ್ ಮಾಡಬೇಕು. ಟೆಸ್ಟ್ ಮಾಡಿ 10 ದಿನಗಳ ಕಾಲ ಐಸೋಲೇಷನ್ ಮಾಡಬೇಕು. ನೆಗೆಟಿವ್ ರಿಪೋರ್ಟ್ ಬಂದರೂ ಪ್ರತ್ಯೇಕತೆ ಮಾಡಬೇಕು ಎಂದು ಸೂಚಿಸಲಾಗಿದೆ.
ಕೊರೊನಾ ಪರೀಕ್ಷೆ ಸಂಖ್ಯೆ ಹೆಚ್ಚಿಸಲು ಸೂಚನೆ
ಕೊರೊನಾ ಟೆಸ್ಟಿಂಗ್ ಸಂಖ್ಯೆ ಹೆಚ್ಚಳ ಮಾಡಲು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಟೆಸ್ಟಿಂಗ್ ಸಂಖ್ಯೆ ಹೆಚ್ಚಿಸಿ ರ್ಯಾಂಡಮ್ ಚೆಕ್ ಮಾಡಲು ಆದೇಶ ನೀಡಲಾಗಿದೆ. 60 ಸಾವಿರದಿಂದ 80 ಸಾವಿರಕ್ಕೆ ಟೆಸ್ಟಿಂಗ್ ಹೆಚ್ಚಿಸಿರುವ ಸರ್ಕಾರ, ಪ್ರತಿ ಜಿಲ್ಲೆಗೆ ಇಷ್ಟೇ ಟೆಸ್ಟ್ ಮಾಡಬೇಕು ಎಂದು ಟಾರ್ಗೆಟ್ ನೀಡಿದೆ. ಜೊತೆಗೆ ರ್ಯಾಂಡಮ್ ಚೆಕ್ ಮಾಡಲು ಸೂಚನೆ ಕೊಡಲಾಗಿದೆ. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ, ಬೀದಿ ಬದಿ ವ್ಯಾಪಾರಿಗಳಿಗೆ, ಮಾರ್ಕೆಟ್ ವ್ಯಾಪಾರಿಗಳಿಗೆ, ಮಾಲ್, ರೆಸ್ಟೋರೆಂಟ್ ಸಿಬ್ಬಂದಿಗೆ, ಫ್ಯಾಕ್ಟರಿ, ಗಾರ್ಮೆಂಟ್ಸ್ಗಳಲ್ಲಿ ರ್ಯಾಂಡಮ್ ಚೆಕ್ ಮಾಡಬೇಕು ಎಂದು ಹೇಳಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ