ಧಾರವಾಡ: ಬಿಜೆಪಿ ನಾಯಕ ರಾಜೇಂದ್ರ ಗೋಖಲೆ ನಿಧನ

ಧಾರವಾಡ: ಬಿಜೆಪಿ ಮುಖಂಡ, ರಾಮನಗರ ನಿವಾಸಿ ರಾಜೇಂದ್ರ ಗೋಖಲೆ (63) ಭಾನುವಾರ ಪುಣೆಯಲ್ಲಿ ನಿಧನರಾದರು.
ಕಳೆದ ಮೂರು ತಿಂಗಳುಗಳಿಂದ ಅವರು ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದರು. ಅವರನ್ನು ಪುಣೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

ಬಾಲ್ಯದಲ್ಲಿಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿದ್ದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿ, ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿದ್ದಾರೆ. ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ನಲ್ಲಿ ಹೆಸರುವಾಸಿಯಾಗಿದ್ದರು. ಸಂಘಟನೆಯ ಕಷ್ಟ ಕಾಲದಲ್ಲಿ ‌ಕಷ್ಟಪಟ್ಟು ಕೆಲಸ ಮಾಡಿದ್ದಾರೆ. ತುರ್ತು ಪರಿಸ್ಥಿತಿಯಲ್ಲಿ ಜೈಲುವಾಸವನ್ನು ಅನುಭವಿಸಿದ್ದರು. ಅಸ್ಸಾಂನಲ್ಲಿ ಎಂಟು ವರ್ಷಗಳ ಕಾಲ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಪೂರ್ಣಾವಧಿ ಪ್ರಚಾರಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ದಿ. ಸುಷ್ಮಾ ಸ್ವರಾಜ್ ಅವರು ಬಳ್ಳಾರಿಯಲ್ಲಿ ಚುನಾವಣೆ ಸ್ಪರ್ಧಿಸಿದ್ದಾಗ ಚುನಾವಣೆಯ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಅನೇಕ ವರ್ಷ ಅವರ ಮನೆ ಎಬಿವಿಪಿ ಕಾರ್ಯಾಲಯವಾಗಿತ್ತು.
ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಹಾಗೂ ಮಾಜಿ ಉಪಪ್ರಧಾನಿ ಎಲ್‌.ಕೆ. ಅಡ್ವಾಣಿ ಅವರು ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸವನ್ನು ಕೈಗೊಂಡರೆ ಆ ಪ್ರವಾಸದ ಸಂಪೂರ್ಣ ನಿರ್ವಹಣೆಯನ್ನು ಗೋಖಲೆ ನಿರ್ವಹಿಸುತ್ತಿದ್ದರು. ಅಲ್ಲದೇ ವಾಜಪೇಯಿ ಹಾಗೂ ಅಡ್ವಾಣಿ ಅವರು ಗೋಖಲೆ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಹುಬ್ಬಳ್ಳಿ ಈದ್ಗಾ ಮೈದಾನ ಪ್ರಕರಣದಲ್ಲಿ ಬಿಜೆಪಿ ಮುಖಂಡೆ ಉಮಾ ಭಾರತಿ ಅವರೊಂದಿಗೆ ರಾಜೇಂದ್ರ ಗೋಖಲೆ ಮೂಂಚೂಣಿಯಲ್ಲಿ ಕೆಲಸ ಮಾಡಿದ್ದರು.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement