ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ:1499 ಪುಟಗಳ ಆರೋಪಪಟ್ಟಿ ಸಲ್ಲಿಸಿದ ಪೊಲೀಸರು

ಮೈಸೂರು: ಮೈಸೂರು ಗ್ಯಾಂಗ್‌ ರೇಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 1,499 ಪುಟಗಳ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಆರು ಆರೋಪಿಗಳನ್ನು ಹೆಸರಿಸಲಾಗಿದೆ. ಘಟನೆಯಲ್ಲಿ ಒಬ್ಬ ಆರೋಪಿಯ ಪಾತ್ರವಿಲ್ಲವಾದ್ದರಿಂದ ಆತನ ವಿರುದ್ಧದ ಆರೋಪಗಳನ್ನು ಕೈಬಿಡಲಾಗಿದೆ ಎಂದು ಪೊಲೀಸರು ಭಾನುವಾರ (ನವೆಂಬರ್ 28) ತಿಳಿಸಿದ್ದಾರೆ.
ಪೊಲೀಸರು ಆರು ಆರೋಪಿಗಳ ವಿರುದ್ಧ ಸೆಕ್ಷನ್ 397, 376B , 120B, 334 325 ಮತ್ತು 326 ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ
ಘಟನೆ ಆಗಸ್ಟ್ 24 ರಂದು ನಡೆದಿತ್ತು, ಸಂತ್ರಸ್ತೆ ತನ್ನ ಗೆಳೆಯನೊಂದಿಗೆ ಕಾಲೇಜ್ ಮುಗಿಸಿ ಚಾಮುಂಡಿ ಬೆಟ್ಟದ ಬಳಿಯ ಏಕಾಂತ ಸ್ಥಳಕ್ಕೆ ಹೋಗಿದ್ದ ವೇಳೆ ಗ್ಯಾಂಗ್ ರೇಪ್ ಮಾಡಲಾಗಿತ್ತು. ಏಳು ಮಂದಿ ದುಷ್ಕರ್ಮಿಗಳು ಇಬ್ಬರ ಮೇಲೆ ಹಲ್ಲೆ ನಡೆಸಿ, ಯುವಕನಿಂದ 3 ಲಕ್ಷ ರೂ.ಹಣ ಕೇಳಿದ್ದಲ್ಲದೆ ಬೆದರಿಕೆ ಹಾಕಿದ್ದರು.
ಘಟನೆಯ ನಂತರ ಸಂತ್ರಸ್ತರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಮಿಳುನಾದು ಮೂಲದ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದರು.

ಪ್ರಮುಖ ಸುದ್ದಿ :-   ಸಿದ್ದರಾಮಯ್ಯಗೆ ಬ್ಲ್ಯಾಕ್‌ಮೇಲ್‌ ಮಾಡಲು ಸ್ಟಿಂಗ್ ಆಪರೇಷನ್.. ಇದ್ರಲ್ಲಿ ಕಾಂಗ್ರೆಸ್ಸಿನವರು ಇದ್ದಾರೆ: ಸಚಿವ ಯತೀಂದ್ರ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement