ಸ್ಮಶಾನಕ್ಕೆ ತೆರಳುತ್ತಿದ್ದ ಮ್ಯಾಟಡೋರ್‌ ವಾಹನ ಲಾರಿಗೆ ಡಿಕ್ಕಿ: 18 ಮಂದಿ ಸಾವು

ಕೋಲ್ಕತ್ತಾ: ಮೃತದೇಹವನ್ನು ಸ್ಮಶಾನಕ್ಕೆ ಕರೆದೊಯುತ್ತಿದ್ದ ವಾಹನಕ್ಕೆ ಲಾರಿ ಡಿಕ್ಕಿಯಾದ ಪರಿಣಾಮ 18 ಮಂದಿ ಸಾವಿಗೀಡಾದ ಭೀಕರ ದುರಂತ ಪಶ್ಚಿಮ ಬಂಗಾಳದಲ್ಲಿ ಶನಿವಾರ ರಾತ್ರಿ ನಡೆದಿದೆ.
ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು,ಹಂಸಖಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಫುಲ್ಬರಿಯಲ್ಲಿ ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಮ್ಯಾಟಡೋರ್ ಡಿಕ್ಕಿ ಹೊಡೆದಿದ್ದರಿಂದ ಈ ದುರಂತ ಸಂಭವಿಸಿದೆ.
ಈ ದುರ್ಘಟನೆಯಲ್ಲಿ 18 ಮಂದಿ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಶಕ್ತಿನಗರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಹೊತ್ತೊಯ್ಯುತ್ತಿದ್ದ ಮ್ಯಾಟಡೋರ್‌ ವಾಹನದಲ್ಲಿ ಸುಮಾರು 20 ಜನರಿದ್ದರು. ಉತ್ತರ 24 ಪರಗಣದ ಬಾಗ್ಡಾದಿಂದ ನವದ್ವೀಪದ ಸ್ಮಶಾನದ ಕಡೆಗೆ ತೆರಳುತ್ತಿದ್ದಾಗ ದಾರಿ ಮಧ್ಯೆ ಟ್ರಕ್‌ಗೆ ಮೆಟಾಡರ್‌ ವಾಹನ ಡಿಕ್ಕಿ ಹೊಡೆದಿದೆ. ವಿಪರೀತ ಇಬ್ಬನಿ ಬೀಳುತ್ತಿದ್ದ ಕಾರಣ ಚಾಲಕನಿಗೆ ರಸ್ತೆ ಸರಿಯಾಗಿ ಕಾಣಲಿಲ್ಲ. ಹಾಗಾಗಿ ಆತ ತುಂಬ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ. ಇದರಿಂದಾಗಿ ರಸ್ತೆ ಪಕ್ಕದಲ್ಲಿ ನಿಂತ ಟ್ರಕ್ಕಿಗೆ ಮೃತದೇಹವನ್ನು ಹೊತ್ತ ವಾಹನವು ಡಿಕ್ಕಿ ಹೊಡೆದಿದ್ದೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೆಟಡಾರ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ 20 ಮಂದಿಯಲ್ಲಿ 18 ಜನರು ಮೃತಪಟ್ಟಿದ್ದು ಅದರಲ್ಲಿ 10 ಪುರುಷರು, ಏಳು ಮಹಿಳೆಯರು ಮತ್ತು ಆರು ವರ್ಷದ ಬಾಲಕಿ ಇದ್ದಾಳೆ. ಬಾಗ್ಡಾದ ಬಳಿಯ ಪರ್ಮಧಾನ್ ಎಂಬಲ್ಲಿಯ ನಿವಾಸಿಯಾಗಿದ್ದ ಶ್ರಬಣಿ ಮುಹುರಿ ಎಂಬ ವೃದ್ಧೆ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆ ನಡೆಸಲು ಇವೆರೆಲ್ಲರು ಸ್ಮಶಾನಕ್ಕೆ ತೆರಳಿದ್ದರು.

ಪ್ರಮುಖ ಸುದ್ದಿ :-   ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement