ಕೆನರಾ ಕ್ರೆಡಿಟ್ ಸೌಹಾರ್ದ ಸಂಘಕ್ಕೆ ೧.೨೯ ಲಕ್ಷ ರೂ. ಲಾಭ

ಕುಮಟಾ: ಕೆನರಾ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತದ ವಾರ್ಷಿಕ ಸಭೆಯು ಬಗ್ಗೋಣದ ಲಯನ್ಸ್ ಭವನದಲ್ಲಿ ನಡೆಯಿತು.
ಸಹಕಾರಿ ಸಂಘದ ಅಧ್ಯಕ್ಷರಾದ ಡಾ.ಜಿ.ಜಿ.ಹೆಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂಘವು ೨೦೨೦-೨೧ ರಲ್ಲಿ ೧೨೯೭೦೧ ರೂ.ಗಳಷ್ಟು ಲಾಭ ಮಾಡಿದೆ. ಲಾಕ್ ಡೌನ್ ಇತ್ಯಾದಿ ಸಮಸ್ಯೆಯ ಮಧ್ಯೆಯೂ ಸಂಘವು ಲಾಭಗಳಿಸಿದ್ದು ಸಂತಸದ ವಿಷಯವಾಗಿದೆ. ಜನರು ಆರ್ಥಿಕ ಅಭಿವೃದ್ಧಿ ಹೊಂದಬೇಕಾದರೆ ಹಣಕಾಸು ಸಂಸ್ಥೆಯ ಕಾರ್ಯವು ಮುಖ್ಯವಾಗಿರುತ್ತದೆ. ಮುಂದಿನ ದಿನದಲ್ಲಿ ಸಂಘವು ಸಮಾಜಕ್ಕೆ ಇನ್ನೂ ಹೆಚ್ಚಿನ ನೆರವು ನೀಡುವ ಉದ್ದೇಶ ಹೊಂದಿದೆ. ಅಗತ್ಯ ಇರುವ ಎಲ್ಲ ವಲಯಕ್ಕೆ ಹಣಕಾಸಿನ ನೆರವನ್ನು ಸಂಘವು ನೀಡಲಿದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಸುಧಾಕರ ನಾಯಕ, ಉಪಾಧ್ಯಕ್ಷ ಹರೀಶ ಬಿ. ಗೋಳಿ, ಹಿರಿಯ ನಿರ್ದೆಶಕರಾದ ಡಾ. ಅಶೋಕ ಭಟ್ಟ ಹಳಕಾರ, ಎಂ.ಎಸ್.ನಾಯ್ಕ, ರಂಗನಾಥ ಪ್ರಭು, ಅಶ್ವಿನಿ ಬಸ್ರೂರ್, ಧನಶ್ರೀ ಶ್ಯಾನಭಾಗ ಮತ್ತಿತರರು ಉಪಸ್ಥಿತರಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

advertisement

ನಿಮ್ಮ ಕಾಮೆಂಟ್ ಬರೆಯಿರಿ