ಕರ್ನಾಟಕದಲ್ಲಿ ಲಾಕ್‌ಡೌನ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣ ಕ್ರಮ: ಡಾ.ಸುಧಾಕರ

ಬೆಂಗಳೂರು: ದೇಶದೆಲ್ಲೆಡೆ ರೂಪಾಂತರಿ ವೈರಸ್ ಒಮಿಕ್ರಾನ್ ಭೀತಿ ಉಂಟಾಗಿದ್ದು, ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.
ರಾಜ್ಯದಲ್ಲಿ ಲಾಕ್‌ಡೌನ್ ಎಂಬುದು ಸುಳ್ಳು ಸುದ್ಧಿ ಈ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸಲಾಗುತ್ತದೆ. ಜನತೆ ಆತಂಕಕ್ಕೀಡಾಗುವ ಅವಶ್ಯಕತೆಯಿಲ್ಲ .ಲಾಕ್‌ಡೌನ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದರೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಸರ್ಕಾರ ಘೋಷಣೆ ಮಾಡುವವರೆಗೂ ಲಾಕ್‌ಡೌನ್ ಮಾಡಲ್ಲ ಎಂದು ಸ್ಪಷ್ಟಪಡಿಸಿದರು. ಲಾಕ್‌ಡೌನ್ ಬಗ್ಗೆ ಜನರನ್ನು ತಪ್ಪುದಾರಿಗೆ ಎಳೆಯಬಾರದು ಎಂದು ತಾಕೀತು ಮಾಡಿದರು. ಅಲ್ಲದೆ, ರಾಜ್ಯದ ಜನತೆ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.
ಲಾಕ್‌ಡೌನ್ ಕುರಿತಂತೆ ಸುಳ್ಳು ಸುದ್ಧಿ ಹರಡುತ್ತಿರುವವರ ವಿರುದ್ಧ ಸೂಕ್ತಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಕೊರೊನಾ ಲಾಕ್‌ಡೌನ್‌ನಿಂದ ಸಾಕಷ್ಟು ಜನ ಉದ್ಯೋಗ ವಂಚಿತರಾಗಿದ್ದಾರೆ. ವ್ಯಾಪಾರ ವಾಣಿಜ್ಯ ವಹಿವಾಟುಗಳು ಚುರುಕುಗೊಳ್ಳುತ್ತಿದೆ. ಈ ಸಂದರ್ಭದಲ್ಲಿ ಸುಳ್ಳು ಸುದ್ಧಿಗಳ ಮೂಲಕ ಜನರನ್ನು ಗೊಂದಕ್ಕೀಡು ಮಾಡುವುದು ಬೇಡ ಎಂದರು.
ಓಮಿಕ್ರಾನ್‌ ಆತಂಕದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಿಗ್ಗೆ ತಜ್ಞರ ಜೊತೆ ಸಭೆ ನಡೆಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸುಧಾಕರ್ ತಿಳಿಸಿದರು.
ಕಳೆದ 12 ದಿನಗಳಲ್ಲಿ ವಿದೇಶದಿಂದ ಬಂದವರ ಮೇಲೆ ನಿಗಾ ಇಡಲಾಗಿದೆ. ಅದರಲ್ಲೂ ಆಫ್ರಿದಿಂದ ಬಂದವರ ಮೇಲೆ ಹೆಚ್ಚಿನ ನಿಗಾ ಇಡಲಾಗಿದೆ ಎಂದು ಡಾ. ಕೆ ಸುಧಾಕರ್‌ ತಿಳಿಸಿದರು.
ನನಗೆ ತಿಳಿದಿರುವ ಮಾಹಿತಿ ಪ್ರಕಾರ ಓಮಿಕ್ರಾನ್‌ ಸೋಂಕು ಇದು ಬಹಳ ವೇಗವಾಗಿ ಹರಡುತ್ತಿದೆ. ಆದರೆ ಈ ಸೋಂಕು ಗಂಭೀರ ಪ್ರಮಾಣದ್ದು ಅಲ್ಲ ಎಂದು ತಜ್ಞರು ಹೇಳುತ್ತಿದ್ದಾರೆ ಎಂದು ಅವರು ತಿಳಿಸಿದರು.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಅಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement