ಟ್ವಿಟರ್ ಸಿಇಒ ಸ್ಥಾನಕ್ಕೆ ಜ್ಯಾಕ್ ಡಾರ್ಸೆ ರಾಜೀನಾಮೆ; ನೂತನ ಸಿಇಒ ಆಗಿ ಭಾರತೀಯ ಮೂಲದ ಪರಾಗ್ ಅಗರ್​ವಾಲ್ ನೇಮಕ

ನವದೆಹಲಿ: ಟ್ವಿಟರ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸ್ಥಾನಕ್ಕೆ ಜ್ಯಾಕ್ ಡಾರ್ಸೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಟ್ವಿಟರ್ ಸಂಸ್ಥೆಯ ಸಹ ಸಂಸ್ಥಾಪಕರಾಗಿದ್ದ ಜ್ಯಾಕ್ ಡಾರ್ಸೆ ಟ್ವಿಟರ್ ಸಂಸ್ಥೆಯಲ್ಲಿ 16 ವರ್ಷ ಕಾರ್ಯನಿರ್ವಹಿಸಿದ್ದರು. ಇದೀಗ, ಟ್ವಿಟರ್ ಹೊಸ ಸಿಇಒ ಆಗಿ ಭಾರತೀಯ ಪರಾಗ್ ಅಗರವಾಲ್ ಆಯ್ಕೆ ಆಗಿದ್ದಾರೆ. ಮುಂಬೈನ ಐಐಟಿಯಲ್ಲಿ ವ್ಯಾಸಂಗ ಮಾಡಿರುವ ಪರಾಗ್, ಪ್ರಸ್ತುತ ಟ್ವಿಟರ್​ನ ಮುಖ್ಯ ತಂತ್ರಜ್ಞಾನ ಅಧಿಕಾರಿ ಆಗಿದ್ದಾರೆ. 2017ರಲ್ಲಿ ಮುಖ್ಯ ತಂತ್ರಜ್ಞಾನ ಅಧಿಕಾರಿಯಾಗಿರುವ ಅಗರವಾಲ್ ಮಂಡಳಿಯ ಸದಸ್ಯರಾಗಲಿದ್ದಾರೆ
ಜ್ಯಾಕ್ ಡೋರ್ಸೆ ಸ್ಕ್ವೇರ್ ಐಎನ್​ಸಿ ಕಡೆಗೆ ಅಧಿಕ ಗಮನ ನೀಡುತ್ತಿದ್ದಾರೆ, ಟ್ವಿಟರ್ ಕಡೆಗೆ ಗಮನಹರಿಸುತ್ತಿಲ್ಲ ಎಂದು ಟ್ವಿಟರ್​ನ ಪಾಲುದಾರ ಸಂಸ್ಥೆ ಎಲಿಯಟ್ ಮ್ಯಾನೇಜ್​ಮೆಂಟ್ ಕಾರ್ಪ್ ಈ ಮೊದಲು ಆರೋಪ ಮಾಡಿತ್ತು. ಅಷ್ಟೇ ಅಲ್ಲದೆ, ಡೋರ್ಸೆ ಟ್ವಿಟರ್ ಸಿಇಒ ಸ್ಥಾನದಿಂದ ಕೆಳಗೆ ಇಳಿಯಬೇಕು ಎಂದು 2020ರ ಆರಂಭದಲ್ಲಿ ಒತ್ತಾಯಿಸಿತ್ತು.
ಟ್ವಿಟರ್ ಸಿಇಒ ಸ್ಥಾನಕ್ಕೆ ಜ್ಯಾಕ್ ಡಾರ್ಸೆ ರಾಜೀನಾಮೆ ನೀಡಿರುವ ಬಗ್ಗೆ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಟ್ವೀಟ್​ನಲ್ಲಿ ಲಗತ್ತಿಸಿದ್ದಾರೆ. ಇದನ್ನು ಯಾರಾದರೂ ಕೇಳಿಸಿಕೊಂಡಿರಾ ಎಂದು ಖಚಿತವಿಲ್ಲ. ಆದರೆ, ನಾನು ಟ್ವಿಟರ್​ಗೆ ರಾಜೀನಾಮೆ ನೀಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ನಾನು ಟ್ವಿಟರ್ ಅನ್ನು ತೊರೆಯಲು ನಿರ್ಧರಿಸಿದ್ದೇನೆ ಏಕೆಂದರೆ ಕಂಪನಿಯು ಅದರ ಸಂಸ್ಥಾಪಕರಿಂದ ಮುಂದುವರಿಯಲು ಸಿದ್ಧವಾಗಿದೆ ಎಂದು ನಾನು ನಂಬುತ್ತೇನೆ” ಎಂದು ಡಾರ್ಸೆ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಟ್ವಿಟ್ಟರ್‌ನ ಸಿಇಒ ಆಗಿ ಪರಾಗ್‌ನಲ್ಲಿ ನನ್ನ ನಂಬಿಕೆಯು ಬಲವಾಗಿದೆ. ಕಳೆದ 10 ವರ್ಷಗಳಲ್ಲಿ ಅವರ ಕೆಲಸವು ಪರಿವರ್ತನೆಯಾಗಿದೆ. ಅವರ ಕೌಶಲ್ಯ, ಹೃದಯ ಮತ್ತು ಆತ್ಮಕ್ಕೆ ನಾನು ಕೃತಜ್ಞನಾಗಿದ್ದೇನೆ. ಇದು ಮುನ್ನಡೆಸುವ ಸಮಯ ಎಂದು ಹೇಳಿದ್ದಾರೆ.
45 ವರ್ಷದ ಡಾರ್ಸೆ, ಪಾವತಿ ಕಂಪನಿ ಸ್ಕ್ವೇರ್ ಇಂಕ್‌ನ ಮುಖ್ಯಸ್ಥರೂ ಆಗಿದ್ದಾರೆ ಮತ್ತು ಇತ್ತೀಚೆಗೆ ಕ್ರಿಪ್ಟೋಕರೆನ್ಸಿಗಳಲ್ಲಿ ಹೆಚ್ಚಿನ ಆಸಕ್ತಿಯನ್ನು ತೆಗೆದುಕೊಳ್ಳುತ್ತಿದ್ದಾರೆ. ಡಾರ್ಸೆ 2008 ರಲ್ಲಿ ಟ್ವಿಟರ್‌ನ ಸಿಇಒ ಹುದ್ದೆಯಿಂದ ಕೆಳಗಿಳಿದರು, ಆದರೆ 2015 ರಲ್ಲಿ ಕಂಪನಿಗೆ ಮರಳಿದ್ದರು.

ನಿಮ್ಮ ಕಾಮೆಂಟ್ ಬರೆಯಿರಿ

advertisement