ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ಪ್ರಕಟ

ಬೆಂಗಳೂರು: ಅವಧಿ ಮುಗಿದ ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಸೋಮವಾರ ವೇಳಾಪಟ್ಟಿ ಪ್ರಕಟಿಸಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದೆ.
ಡಿಸೆಂಬರ್ 30 ರಂದು ಮತ ಎಣಿಕೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ಡಿಸೆಂಬರ್ 15 ಕೊನೆ ದಿನವಾಗಿದ್ದು, ಡಿ.18 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಚುನಾವಣೆ ಸಂಬಂಧ ಡಿ.8ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದಾರೆ.
1,185 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದ್ದು, 19 ಪುರಸಭೆಗಳು, 34 ಪಟ್ಟಣ ಪಂಚಾಯತಗಳು ವಿವಿಧ ಕಾರಣಗಳಿಂದ ತೆರವಾಗಿರುವ ನಗರಸಭೆಯ 5 ಸ್ಥಾನಗಳು, ಪುರಸಭೆಯ 3 ಮತ್ತು ಪಟ್ಟಣ ಪಂಚಾಯತ್ ನ 1 ವಾರ್ಡ್ ಗೆ ಚುನಾವಣೆ ನಡೆಯಲಿದೆ.
ಡಿಸೆಂಬರ್ 29 ರಂದು ಮರು ಮತದಾನವೂ ನಡೆಯಲಿದೆ. ಡಿಸೆಂಬರ್ 30 ಕ್ಕೆ ಮತ ಎಣಿಕೆ ನಡೆಯಲಿದೆ.

0 / 5. 0

ಪ್ರಮುಖ ಸುದ್ದಿ :-   ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement