ಹಾಸನ: ತಣ್ಣಗಾಗಿದ್ದ ಕೊರೊನಾ ವೈರಸ್ ಈಗ ಮತ್ತೊಂದು ರೂಪದಲ್ಲಿ ಕಾಡಲಾರಂಭಿಸಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಮೊರಾರ್ಜಿ ವಸತಿ ಶಾಲೆಯ 13 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಒಂದು ತಿಂಗಳ ಹಿಂದೆ ವಸತಿ ಶಾಲೆಯ ಇಬ್ಬರು ಮಕ್ಕಳಿಗೆ ಕೊರೊನಾ ಸೋಂಕು ತಗುಲಿತ್ತು. ಆಗ ಎಲ್ಲ ವಿದ್ಯಾರ್ಥಿಗಳಿಗೆ ಕೊವಿಡ್ ಟೆಸ್ಟ್ ಮಾಡಲಾಗಿತ್ತು. ಆದರೆ ಹೆಚ್ಚುವರಿಯಾಗಿ ಯಾರಿಗೂ ಸೋಂಕು ತಗುಲಿರಲಿಲ್ಲ. ಕೆಲ ಮಕ್ಕಳಲ್ಲಿ ರೋಗ ಲಕ್ಷಣ ಹಿನ್ನೆಲೆಯಲ್ಲಿ ಈಗ ಮತ್ತೆ ಆರೋಗ್ಯ ಇಲಾಖೆ ಎಲ್ಲ ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಿಸಿದೆ. ಈ ವೇಳೆ 200 ಮಕ್ಕಳ ಪೈಕಿ 13 ವಿದ್ಯಾರ್ಥಿಗಳಲ್ಲಿ ಕೊರೊನಾ ದೃಢಪಟ್ಟಿದೆ.
ವಸತಿ ಶಾಲೆಯಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊರೊನಾ ಸೋಂಕಿತ ವಿದ್ಯಾರ್ಥಿಗಳನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡಡಲಾಗುತ್ತಿದೆ. ಉಳಿದ ವಿದ್ಯಾರ್ಥಿಗಳ ಮೇಲೆಯೂ ಆರೋಗ್ಯ ಇಲಾಖೆಯ ಅಧಿಕಾರಿಗಳು ನಿಗಾ ಇರಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ