ದಕ್ಷಿಣ ಆಫ್ರಿಕಾದಿಂದ ಚಂಡೀಗಢಕ್ಕೆ ಬಂದ ಪ್ರಯಾಣಿಕನಿಗೆ ಕೊರೊನಾ ಸೋಂಕು ದೃಢ

ಚಂಡೀಗಢ: ದಕ್ಷಿಣ ಆಫ್ರಿಕಾದಿಂದ ಚಂಡೀಗಢಕ್ಕೆ ಬಂದಿರುವ 39 ವರ್ಷದ ವ್ಯಕ್ತಿಯೊಬ್ಬರಿಗೆ ಕೊರೊನಾ ದೃಢಪಟ್ಟಿದೆ ಎಂದು ಕೇಂದ್ರಾಡಳಿತ ಪ್ರದೇಶದ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ನವೆಂಬರ್ 21ರಂದು ದಕ್ಷಿಣ ಆಫ್ರಿಕಾದಿಂದ ಚಂಡೀಗಢಕ್ಕೆ ಆಗಮಿಸಿದ ಪ್ರಯಾಣಿಕನಿಗೆ ವಿಮಾನ ನಿಲ್ದಾಣದಲ್ಲಿ ಆರ್‌ಟಿಪಿಸಿಆರ್‌ ಪರೀಕ್ಷೆ ನಡೆಸಿದಾಗ ವರದಿ ನೆಗೆಟಿವ್ ಬಂದಿತ್ತು. ನಂತರ ಅವರನ್ನು ಮನೆ ಪ್ರತ್ಯೇಕತೆಯಲ್ಲಿ ಇರಿಸಲಾಗಿತ್ತು. 7 ದಿನಗಳ ಬಳಿಕ ಮತ್ತೆ ಪರೀಕ್ಷೆ ಮಾಡಿದಾಗ ವ್ಯಕ್ತಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ.
ಈಗ ಈ ವ್ಯಕ್ತಿ ಜೊತೆಗೆ ಸಂಪರ್ಕ ಹೊಂದಿದ್ದ ಇಬ್ಬರನ್ನು ಮತ್ತು ಕುಟುಂಬದವರಿಗೆ ಕೋವಿಡ್-19 ಪರೀಕ್ಷೆ ನಡೆಸಲಾಗಿದ್ದು, ಎಲ್ಲರಿಗೂ ಕೊರೊನಾ ನೆಗೆಟಿವ್ ವರದಿ ಬಂದಿದೆ ಎಂದ ತಿಳಿಸಿರುವ ಅಧಿಕಾರಿ ಕೊರೊನಾ ವೈರಸ್‍ನ ರೂಪಾಂತರ ತಳಿ ಓಮಿಕ್ರಾನ್ ಪತ್ತೆಹಚ್ಚಲು ಅಧಿಕಾರಿಗಳು ವ್ಯಕ್ತಿಯ ಮಾದರಿಗಳನ್ನು ದೆಹಲಿಯ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರಕ್ಕೆ (ಎನ್‍ಸಿಡಿಸಿ) ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೊರೊನಾ ರೂಪಾಂತರ ತಳಿಯನ್ನು ನಿಯಂತ್ರಿಸಲು ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರಲಾಗಿದ್ದು, ಅದರಂತೆ ಕೊರೊನಾ ಪಾಸಿಟಿವ್ ಬಂದವರಿಗೆ ಪ್ರತ್ಯೇಕವಾಗಿ ಕ್ವಾರಂಟೈನ್ ಗೊಳಿಸಲಾಗುತ್ತದೆ. ಪಾಸಿಟಿವ್ ಪ್ರಕರಣಗಳ ಮಾದರಿಗಳನ್ನು ಹೋಲ್ ಜೀನೋಮ್ ಸೀಕ್ವೆನ್ಸಿಂಗ್‍ಗಾಗಿ ದೆಹಲಿಯ ಎನ್‍ಸಿಡಿಸಿಗೆ ಕಳುಹಿಸಲಾಗುತ್ತದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಸೊಳ್ಳೆ ಬತ್ತಿಯಿಂದ ಹೊತ್ತಿಕೊಂಡ ಬೆಂಕಿ: ಒಂದೇ ಕುಟುಂಬದ ಆರು ಮಂದಿ ಸಾವು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement