ಹಾವೇರಿ: ಕೊಬ್ಬರಿ ಹೋರಿ ಬೆದರಿಸುವ ಹಬ್ಬದಲ್ಲಿ ಅನಾಹುತ; ಹೋರಿ ದಾಳಿಯಿಂದ 9 ಜನರಿಗೆ ಗಾಯ

ಹಾವೇರಿ: ತಾಲೂಕಿನ ಬಸಾಪುರ ಗ್ರಾಮದಲ್ಲಿ ನಡೆದ ಕೊಬ್ಬರಿ ಹೋರಿ ಬೆದರಿಸುವ ಹಬ್ಬದ ಸ್ಪರ್ಧೆಯಲ್ಲಿ ಹೋರಿ ತಿವಿದು ಒಂಬತ್ತು ಜನರಿಗೆ ಗಾಯವಾಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗ್ರಾಮದಲ್ಲಿ ಈ ಬಾರಿ ಗ್ರಾಮಸ್ಥರು ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಿದ್ದರು. ಬೈಕ್, ಫ್ರಿಜ್‌ ಸೇರಿದಂತೆ ವಿವಿಧ ಬಗೆಯ ಬಹುಮಾನಗಳನ್ನು ಇಡಲಾಗಿತ್ತು. ಹಾವೇರಿ, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ನೂರಾರು ಸಂಖ್ಯೆಯ ಹೋರಿಗಳು ಮತ್ತು ಸಾವಿರಾರು ಸಂಖ್ಯೆಯ ಜನರು ಹೋರಿ ಹಬ್ಬ ವೀಕ್ಷಣೆಗೆ ಆಗಮಿಸಿದ್ದರು. ಆದರೆ ಬೆದರಿಸುವ ಸ್ಪರ್ಧೆ ಸಮಯದಲ್ಲಿ ಹೋರಿ ತಿವಿದ ಪರಿಣಾಮ ಇಬ್ಬರು ಗಂಭೀರವಾಘಿ ಗಾಯಗೊಂನಡಿದ್ದು ಉಳಿದ ಏಳು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.
ಸಣ್ಣಪುಟ್ಟ ಗಾಯಗೊಂಡವರಿಗೆ ಗುತ್ತಲ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಜಿಲ್ಲಾಸ್ಪತ್ರೆಗೆ ಬಂದ ಏಳೆಂಟು ಜನರಲ್ಲಿ ಬಹುತೇಕರಿಗೆ ಕಣ್ಣು, ಕಾಲು, ಬೆನ್ನು ಮತ್ತು ಕೈ ಸೇರಿದಂತೆ ಹಲವೆಡೆ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಹುಬ್ಬಳ್ಳಿಯ ಕಿಮ್ಸ್‌ ದಾಖಲಿಸಲಾಗಿದೆ.
ಹೋರಿ ಬೆದರಿಸುವ ಹಬ್ಬದಲ್ಲಿ ಎರಡು ಹೋರಿಗಳು ಗಾಯಗೊಂಡಿವೆ. ಹೋರಿಗಳನ್ನು ಅಖಾಡಕ್ಕೆ ಬಿಟ್ಟ ನಂತರ ಅದು ಜನರ ಮೇಲೆ ಜಿಗಿದು ಹೊರಗೋಡಿದ್ದರಿಂದ ಈ ಅವಘಡ ನಡೆದಿದೆ.

ಪ್ರಮುಖ ಸುದ್ದಿ :-   ಸಿದ್ದರಾಮಯ್ಯ ವಿರುದ್ಧದ ನಕಲಿ ಸ್ಟಿಂಗ್‌ ಆಪರೇಷನ್‌ ಪ್ರಕರಣ: ದೆಹಲಿಯ ವ್ಯಕ್ತಿಯ ಬಂಧನ

 

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement