ಓಮಿಕ್ರಾನ್ ಭೀತಿ: ದೇಶಾದ್ಯಂತ ಡಿ. 31ರ ವರೆಗೆ ಕೋವಿಡ್‌ ಮಾರ್ಗಸೂಚಿ ವಿಸ್ತರಣೆ

ನವದೆಹಲಿ: ದೇಶದಲ್ಲಿ ಓಮಿಕ್ರಾನ್ ಹೊಸ ರೂಪಾಂತರ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಡಿಸೆಂಬರ್ 31ರ ತನಕ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ವಿಸ್ತರಣೆ ಮಾಡಿದೆ.
ಹೊಸ ಮಾರ್ಗಸೂಚಿಯ ಪ್ರಕಾರ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗಿದೆ. ಪ್ರತಿಯೊಬ್ಬರನ್ನೂ ಕಡ್ಡಾಯವಾಗಿ ವಿಮಾನ ನಿಲ್ದಾಣಗಳಲ್ಲಿ ತಪಾಸಣೆಗೆ ಒಳಪಡಿಸಲು ಸೂಚಿಸಲಾಗಿದೆ.
ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯಲ್ಲಿ ದೇಶದ ಎಲ್ಲ ರಾಜ್ಯಗಳು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ. ನವಂಬರ್ 25 ರಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಡಿಸೆಂಬರ್ 31ರ ತನಕ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಲಹೆ ನೀಡಿದೆ.
ಕೇಂದ್ರ ಆರೋಗ್ಯ ಸಚಿವಾಲಯವೂ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುವಂತೆ ಸೂಚನೆ ನೀಡಿದೆ.
ಅದರಲ್ಲಿಯೂ ಅಂತರಾಷ್ಟ್ರೀಯ ಪ್ರಯಾಣಿಕರ ಮೇಲೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಸೋಂಕಿನ ಲಕ್ಷಣ ಕಂಡು ಬಂದರೆ ಅವರನ್ನು ಪ್ರತ್ಯೇಕವಾಗಿ ಚಿಕಿತ್ಸೆ ಕೊಡಿಸುವುದು ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ನಿರ್ದೇಶನ ನೀಡಲಾಗಿದೆ.
ಹೊಸ ಮಾದರಿಯ ತಡೆಯ ರೋಗ ಲಕ್ಷಣಗಳು ಕಂಡುಬಂದರೆ ಅದನ್ನು ರಾಜ್ಯ ಸರ್ಕಾರಗಳು ತಕ್ಷಣ ಹೆಚ್ಚಿನ ಪರೀಕ್ಷೆಗೆ ಕಳುಹಿಸುವಂತೆಯೂ ಸೂಚನೆ ನೀಡಲಾಗಿದೆ

ಪ್ರಮುಖ ಸುದ್ದಿ :-   'ಅಕ್ರಮ' ಐಪಿಎಲ್ ಸ್ಟ್ರೀಮಿಂಗ್ ಪ್ರಕರಣ : ಮಹಾರಾಷ್ಟ್ರ ಸೈಬರ್ ಪೊಲೀಸರಿಂದ ನಟಿ ತಮನ್ನಾ ಭಾಟಿಯಾಗೆ ಸಮನ್ಸ್

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement