ಪರಿಷತ್​ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯೇ: ಮೋದಿ ಭೇಟಿ ನಂತರ ದೇವೇಗೌಡರು ಹೇಳಿರುವುದೇನು..?

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಈ ಮಧ್ಯೆ ಇಂದು ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು
ಭೇಟಿ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ದೇವೇಗೌಡ, ಇದುವರೆಗೆ ನಾಲ್ಕೈದು ಬಾರಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದೇನೆ. ಇದುವರೆಗೂ ನನ್ನ ಬಗ್ಗೆ ಮೋದಿಯವರು ಅಗೌರವಯುತವಾಗಿ ನಡೆದುಕೊಂಡಿಲ್ಲ. ತುಂಬ ಪ್ರೀತಿಯಿಂದ ಮಾತನಾಡಿಸಿದ್ದಾರೆ. ಎಲ್ಲ ಬಾರಿ ಭೇಟಿಯಾದಾಗಲೂ ನನ್ನನ್ನು ಚೆನ್ನಾಗಿಯೇ ಮಾತನಾಡಿಸಿದ್ದಾರೆ. ನನಗೆ ಮಂಡಿನೋವು ಇರುವುದರಿಂದ ಅವರೇ ಬಾಗಿಲವರೆಗೂ ಬಿಟ್ಟರು ಎಂದು ತಿಳಿಸಿದ್ದಾರೆ.

ಪರಿಷತ್​ ಚುನಾವಣೆಯಲ್ಲಿ ಮೈತ್ರಿ?
ಪರಿಷತ್​ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ ವಿಚಾರದ ಬಗ್ಗೆ ಅವರು ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ದೇವೇಗೌಡ ಅವರು, ಪರಿಷತ್‌ ಚುನಾವಣೆಯ ಬಗ್ಗೆ ಚರ್ಚೆ ಮಾಡಿದ್ದೇವೆ, ಯಾವುದೇ ಗೊಂದಲವಾಗದಂತೆ ನಿರ್ಧಾರ ಮಾಡಿ‌ ಎಂದು ನಾನು ಹೇಳಿದ್ದೇನೆ. ಬಿಜೆಪಿಯವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ನೋಡೋಣ ಎಂದರು.
ಕರ್ನಾಟಕದಲ್ಲಿ ನಮ್ಮ ಪಕ್ಷದಿಂದ ಕುಮಾರಸ್ವಾಮಿ ಮತ್ತು ಬಿಜೆಪಿಯ ಯಡಿಯೂರಪ್ಪ ಸೇರಿ ತೀರ್ಮಾನ ಮಾಡುತ್ತಾರೆ. ಯಾವುದೇ ಗೊಂದಲವಾಗದಂತೆ ನಿರ್ಧಾರ ತೆಗೆದುಕೊಳ್ಳಿ ಎಂದು ಹೇಳಿದ್ದೇನೆ. ಬಿಜೆಪಿಯವರು ಏನು ನಿರ್ಣಯ ತೆಗೆದುಕೊಳ್ತಾರೆ ಎಂದು ಕಾದು ನೋಡಬೇಕು ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

ಹಾಸನ ಐಐಟಿ ಬಗ್ಗೆ ಚರ್ಚೆ
ಹಾಸನದಲ್ಲಿ ಐಐಟಿ ಸ್ಥಾಪನೆ ಮಾಡುವ ಬಗ್ಗೆ ಈ ಹಿಂದೆ ಸಚಿವ ಧರ್ಮೇಂದ್ರ ಪ್ರಧಾನ್​ ಅವರಿಗೆ ಮನವಿ ಮಾಡಿದ್ದೆ. ಆದರೆ ಸ್ಥಾಪನೆ ಸಾಧ್ಯವಿಲ್ಲ ಎಂದು ಅವರು ನನಗೆ ಮರುಪತ್ರ ಬರೆದಿದ್ದರು. ಆದರೆ ಈಗ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ನೇರವಾಗಿಯೇ ಚರ್ಚೆ ಮಾಡಿದ್ದೇನೆ ಎಂದು ಹೇಳಿದರು.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement