ಬರ್ತ್ ಡೇ ಪಾರ್ಟಿಯಲ್ಲಿ ಪಾಲ್ಗೊಂಡ 10 ಜನರಿಗೆ ಕೊರೊನಾ ಸೋಂಕು: ಅಪಾರ್ಟ್‌ಮೆಂಟ್ ಸೀಲ್‌ಡೌನ್

ಬೆಂಗಳೂರು: ಬೆಂಗಳೂರಿನಲ್ಲಿ ಬರ್ತ್ ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದ ಹತ್ತು ಮಂದಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.
ನಗರದ ಕೋರಮಂಗಲದ ರಹೇಜ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಬರ್ತ್ ಡೇ ಪಾರ್ಟಿ ಮಾಡಿದ್ದ ೧೦ ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸದ್ಯ ಅಪಾರ್ಟ್ಮೆಂಟ್ ಅನ್ನು ಸೀಲ್ ಡೌನ್ ಮಾಡಲಾಗಿದೆ.
೧೬ ಜನ ಸೇರಿ ಬರ್ತ್ ಡೇ ಪಾರ್ಟಿ ಮಾಡಿದ್ದರು. ಇದರಲ್ಲಿ ಹತ್ತು ಮಂದಿಗೆ ಕರೋನಾ ಸೋಂಕು ದೃಢಪಟ್ಟಿದೆ. ಅಪಾರ್ಟ್ ಮೆಂಟ್ ನ ಫ್ಲಾಟ್ ಕಂಟೈನ್ಮೆಂಟ್ ಜೋನ್ ಎಂದು ಗುರುತಿಸಲಾಗಿದೆ ಎಂದು ಬಿಬಿಎಂಪಿ ಸಿಬ್ಬಂದಿ ತಿಳಿಸಿದ್ದಾರೆ.
ಅಪಾರ್ಟ್‌ಮೆಂಟ್‌ನ ಫ್ಲಾಟ್ ಜೊತೆಗೆ ಬರ್ತಡೆ ಪಾರ್ಟಿಗೆ ಬಂದಿರುವ ಸಂಬಂಧಿಕರ ಮನೆಗಳನ್ನೂ ಕಂಟೈನ್ಮೆಂಟ್ ಜೋನ್ ಎಂದು ಗುರುತು ಮಾಡಲಾಗಿದೆ.
ಧಾರವಾಡದ ಎಸ್ ಡಿಎಂ ಮೆಡಿಕಲ್ ಕಾಲೇಜಿನಲ್ಲಿ ೩೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು. ಇದೀಗ ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ೧೦ ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಆತಂಕ ಹೆಚ್ಚಿಸಿದೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement