ಬೆಂಗಳೂರು: ಬೆಳ್ಳಂಬೆಳಿಗ್ಗೆ ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ..!

ಬೆಂಗಳೂರು: ಬೆಂಗಳೂರಿನ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಗಳು ಇಂದು (ಮಂಗಳವಾರ) ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದಾರೆ. ಜೈಲಿನಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿರುವ ಆರೋಪದ ಮೇಲೆ ಮತ್ತು ಮೊಬೈಲ್, ಗಾಂಜಾ, ಇತರೆ ವಸ್ತುಗಳ ಪೂರೈಕೆ ಆರೋಪದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಈ ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಗಾಂಜಾ ಮತ್ತು ಗಾಂಜಾ ಸೇದುವ ಚಿಲುಮೆ ಪತ್ತೆಯಾಗಿದೆ. ಬೆಳಗ್ಗೆ 6 ಗಂಟೆಯಿಂದಲೂ ಸಿಸಿಬಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಆನೇಕಲ್ ಸಮೀಪದ ಪರಪ್ಪನ ಅಗ್ರಹಾರದಲ್ಲಿ ಸಿಸಿಬಿ ಪರಿಶೀಲನೆ ಮುಂದುವರಿದಿದೆ. ಸಿಸಿಬಿ ಪೊಲೀಸರು ಕಳೆದ ಮೂರು ಗಂಟೆಗಳಿಂದ ಜೈಲಿನಲ್ಲಿ ಪರಿಶೀಲನೆ‌ ಮಾಡುತ್ತಿದ್ದಾರೆ. ಗಾಂಜಾ, ಮೊಬೈಲ್ ಸೇರಿದಂತೆ ಇನ್ನಿತರ ಅಕ್ರಮ ವಸ್ತುಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೈದಿಗಳು ಜೈಲಿನಲ್ಲಿಯೇ ಕೂತು ಅನೇಕ ಅಪರಾಧ ಕೃತ್ಯದಲ್ಲಿ ತೊಡಗಿರುವುದು ಸಹ ಪತ್ತೆಯಾಗಿದೆ.

0 / 5. 0

ಪ್ರಮುಖ ಸುದ್ದಿ :-   ನಾಪತ್ತೆಯಾಗಿದ್ದ ಗದಗ ಕೆಆರ್‌ಐಡಿಎಲ್ ಎಇಇ 40 ದಿನಗಳ ನಂತರ ಮುಂಬೈನಲ್ಲಿ ಪತ್ತೆ

ನಿಮ್ಮ ಕಾಮೆಂಟ್ ಬರೆಯಿರಿ

advertisement