ಓಮಿಕ್ರಾನ್ ಆತಂಕ ಅಂತಾರಾಷ್ಟ್ರೀಯ ವಿಮಾನ ಹಾರಾಟ ಮುಂದೂಡಿದ ಡಿಜಿಸಿಎ

ನವದೆಹಲಿ: ರೂಪಾಂತರಿ ಓಮಿಕ್ರಾನ್’ ತಳಿ ಜಗತ್ತಿನಾದ್ಯಂತ ಸಾಕಷ್ಟು ಆತಂಕ ಸೃ‌‌ಷ್ಟಿಸಿದ್ದು, ಈ ಹಿನ್ನೆಲೆಯಲ್ಲಿ ಡಿಸೆಂಬರ್ 15 ರಿಂದ ನಿಗದಿತ ಅಂತಾರಾಷ್ಟ್ರೀಯ ವಿಮಾನಗಳ ಪುನಾರಂಭವನ್ನು ಮುಂದೂಡಲು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ನಿರ್ಧರಿಸಿದೆ.
ಹೊಸ ರೂಪಾಂತರಿ ವೇಗವಾಗಿ ವಿಕಸನಗೊಳ್ಳುತ್ತಿರುವ ಜಾಗತಿಕ ಸನ್ನಿವೇಶದ ದೃಷ್ಟಿಯಿಂದ, ಎಲ್ಲಾ ಮಧ್ಯಸ್ಥಗಾರರೊಂದಿಗೆ ಸಮಾಲೋಚಿಸಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ . ನಿಗದಿತ ವಾಣಿಜ್ಯ ಅಂತಾರಾಷ್ಟ್ರೀಯ ಪ್ರಯಾಣಿಕರ ಸೇವೆಗಳ ಪುನಾರಂಭದ ದಿನಾಂಕವನ್ನು ಮುಂದೂಡಲಾಗಿದೆ ಎಂದು ಡಿಜಿಸಿಎ ಹೇಳಿಕೆಯಲ್ಲಿ ತಿಳಿಸಿದೆ.
ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ತಿಂಗಳು, ಅಂತಾರಾಷ್ಟ್ರೀಯ ವಿಮಾನ ಕಾರ್ಯಾಚರಣೆಗಳನ್ನು ಮೊದಲಿನಂತೆ ಸಾಮಾನ್ಯಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು.
ಆದರೆ ದಕ್ಷಿಣ ಆಫ್ರಿಕಾದಲ್ಲಿ ಕೋವಿಡ್‌ ಹೊಸ ರೂಪಾಂತರಿ ಓಮಿಕ್ರಾನ್‌ ಸೋಂಕಿನ ಪ್ರಕರಣಗಳು ಈಗಾಗಲೇ ಬೋಟ್ಸ್ವಾನಾ, ಇಂಗ್ಲೆಂಡ್, ಆಸ್ಟ್ರೇಲಿಯಾ, ಆಸ್ಟ್ರಿಯಾ, ಬೆಲ್ಜಿಯಂ, ಬ್ರೆಜಿಲ್, ಕೆನಡಾ, ಜೆಕ್ ರಿಪಬ್ಲಿಕ್, ಡೆನ್ಮಾರ್ಕ್, ಜರ್ಮನಿ, ಹಾಂಗ್ ಕಾಂಗ್, ಇಸ್ರೇಲ್, ಇಟಲಿ, ಜಪಾನ್, ನೆದರ್ಲ್ಯಾಂಡ್ಸ್, ಪೋರ್ಚುಗಲ್, ದಕ್ಷಿಣ ಆಫ್ರಿಕಾ, ಸ್ಪೇನ್, ಸ್ವೀಡನ್, ಸ್ವಿಟ್ಜರ್ಲೆಂಡ್, ನೈಜೀರಿಯಾ ಮತ್ತು ಸೌದಿ ಅರೇಬಿಯಾದಲ್ಲಿ ವರದಿಯಾಗಿವೆ.ಈ ಹಿನ್ನೆಲೆಯಲ್ಲಿ ಈ ನಿರ್ಧಾರ ಬಂದಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ