ವಿಧಾನ ಪರಿಷತ್‌ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಷರೀಫ್ ಬಾಬು ವಿರುದ್ಧ ದೂರು ದಾಖಲು

ಬೆಂಗಳೂರು: ಇಂದು (ಡಿಸೆಂಬರ್ 1) ಬೆಂಗಳೂರು ನಗರ ಕ್ಷೇತ್ರd ವಿಧಾನ ಪರಿಷತ್‌ ‌ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಷರೀಫ್ ಬಾಬು ವಿರುದ್ಧ ದೂರು ದಾಖಲಾಗಿದೆ. ಬಿಜೆಪಿ ಮುಖಂಡರು ದೂರು ಸಲ್ಲಿಸಿದ್ದು,. ಪ್ರಚಾರ ಭಾಷಣದಲ್ಲಿ ಹಣ ನೀಡುವ ಆಮಿಷ ಒಡ್ಡಿದ ಆರೋಪದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ದೂರು ದಾಖಲಾಗಿದೆ.
ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ದೂರು ನೀಡಿದ್ದು, ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಲಾಗಿದೆ ಹಾಗೂ ಚುನಾವಣಾ ಕಣದಿಂದ ಯೂಸುಫ್ ವಜಾಗೊಳಿಸಲು ಮನವಿ ಮಾಡಲಾಗಿದೆ.
ಯೂಸುಫ್ ಬಾಬು ಚುನಾವಣಾ ಕಣದಿಂದ ನಿವೃತ್ತಿಗೊಳಿಸಲಿ. ಯೂಸುಫ್ ಬಾಬು ವಿರುದ್ಧ ಆಯೋಗಕ್ಕೆ ದೂರು ನೀಡಿದ್ದೇವೆ. ಬಿಜೆಪಿ ವಿರುದ್ಧ ಆರೋಪ ಮಾಡುವುದನ್ನ ಕಾಂಗ್ರೆಸ್ ನಿಲ್ಲಿಸಲಿ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್​ಗೆ ಸಂವಿಧಾನದ ಬಗ್ಗೆ ಗೌರವ ಇದ್ದರೆ ಕೂಡಲೇ ಅಭ್ಯರ್ಥಿ ಯೂಸುಫ್​​ ಬಾಬು ನಿವೃತ್ತಿಗೊಳಿಸಲಿ. ಯೂಸುಫ್ ವಿರುದ್ಧ ಕಾಂಗ್ರೆಸ್ ಪಕ್ಷ ಕ್ರಮ ತೆಗೆದುಕೊಳ್ಳಲಿ. ಯೂಸುಫ್​​ ಬಾಬುವನ್ನು ಪಕ್ಷದಿಂದ ವಜಾಗೊಳಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಆಗ್ರಹ ವ್ಯಕ್ತಪಡಿಸಿದ್ದಾರೆ.

ಪ್ರಮುಖ ಸುದ್ದಿ :-   ನಾಪತ್ತೆಯಾಗಿದ್ದ ಗದಗ ಕೆಆರ್‌ಐಡಿಎಲ್ ಎಇಇ 40 ದಿನಗಳ ನಂತರ ಮುಂಬೈನಲ್ಲಿ ಪತ್ತೆ

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement