ಐಎಂಎ ವಂಚನೆ ಪ್ರಕರಣ: ಸಿಬಿಐ, ಇಡಿ ಜೊತೆ ಸಮನ್ವಯಕ್ಕೆ ಸಕ್ಷಮ ಪ್ರಾಧಿಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರವು ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದೊಂದಿಗೆ ಸಮನ್ವಯ ಸಾಧಿಸಿ ಮುಂದಿನ ಅಗತ್ಯ ಕ್ರಮ ಕೈಗೊಳ್ಳಬಹುದು ಎಂದು ಮಂಗಳವಾರ ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದ್ದು, ಈ ಸಂಬಂಧದ ಎಲ್ಲಾ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಲೇವಾರಿ ಮಾಡಿದೆ.
ಐಎಂಎ ಹಗರಣವನ್ನು ಸಿಬಿಐಗೆ ವಹಿಸಬೇಕು ಹಾಗೂ ಹೂಡಿಕೆದಾರರ ಹಣ ಹಿಂದಿರುಗಿಸಲು ಸರ್ಕಾರ ಮತ್ತು ಐಎಎಂ ಸಂಸ್ಥೆಗೆ ನಿರ್ದೇಶಿಸಬೇಕು ಎಂದು ಇಕ್ಬಾಲ್ ಅಹ್ಮದ್ ಮತ್ತಿತರರು ಸಲ್ಲಿಸಿದ್ದ ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ನೇತೃತ್ವದ ವಿಭಾಗೀಯ ಪೀಠ ನಡೆಸಿತು ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಪೂರ್ಣಗೊಳಿಸಿ ವಿಚಾರಣಾಧೀನ ನ್ಯಾಯಾಲಯಕ್ಕೆ ಅಂತಿಮ ತನಿಖಾ ವರದಿ ಸಲ್ಲಿಸಿದೆ. ಹೀಗಾಗಿ ಪಿಐಎಲ್‌ಗಳನ್ನು ಸಲ್ಲಿಸಿದ್ದ ಉದ್ದೇಶವು ಈಡೇರಿಕೆಯಾಗಿದೆ. ವಿಚಾರಣಾ ನ್ಯಾಯಾಲಯದ ಮುಂದೆ ಪ್ರಕರಣ ಇರುವಾಗ ಹೈಕೋರ್ಟ್‌ನಲ್ಲಿ ಈ ಅರ್ಜಿಗಳು ಬಾಕಿ ಉಳಿಸಿಕೊಳ್ಳುವ ಅಗತ್ಯ ಇಲ್ಲ ಎಂದು ಪೀಠ ಅಭಿಪ್ರಾಯಪಟ್ಟಿತು.

ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement