ಪುಲ್ವಾಮಾದಲ್ಲಿ ಎನ್​ಕೌಂಟರ್; ಜೈಷ್​ ಎ ಮೊಹಮ್ಮದ್​ ಉನ್ನತ ಕಮಾಂಡರ್ ಸೇರಿ ಇಬ್ಬರು ಉಗ್ರರು ಹತ

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇಂದು, ಬುಧವಾರ ಮುಂಜಾನೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್​ಕೌಂಟರ್​ನಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ.
ಕಸ್ಬಾಯರ್ ರಾಜಪೋರಾ ಎಂಬ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ, ಜೈಷ್​ ಎ ಮೊಹಮ್ಮದ್ ಸಂಘಟನೆಯ ಉನ್ನತ ಕಮಾಂಡರ್​ ಸೇರಿದಂತೆ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.
ಈ ಬಗ್ಗೆ ಕಾಶ್ಮೀರ ಐಜಿಪಿ ವಿಜಯ್​ ಕುಮಾರ್​ ಮಾಹಿತಿ ನೀಡಿದ್ದು, ಜೈಷ್​ ಎ ಮೊಹಮ್ಮದ್​ ಸಂಘಟನೆಯ ಉನ್ನತ ಕಮಾಂಡರ್ ಯಾಸಿರ್​ ಪರ್ರೆ ಮತ್ತು ಫುರ್ಕಾನ್​ ಎಂಬ ವಿದೇಶಿ ಉಗ್ರ ಭದ್ರತಾ ಪಡೆಗಳ ಗುಂಡಿನ ದಾಳಿಗೆ ಸತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದರಲ್ಲಿ ಯಾಸಿರ್​ ಐಇಡಿ ಪರಿಣತನಾಗಿದ್ದು, ಹಲವು ಭಯೋತ್ಪಾದಕ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದ ಅದು ಅವರು ಹೇಳಿದ್ದಾರೆ.
ಪುಲ್ವಾಮಾದ ಕಸ್ಬಾಯರ್​ ರಾಜ್​ಪೋರ್​​ನಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಸಿಕ್ಕ ಬೆನ್ನಲ್ಲೇ ಭದ್ರತಾ ಪಡೆಗಳು ಕಾರ್ಯಾಚರಣೆಗೆ ಇಳಿದಿದ್ದವು. ಸ್ಥಳವನ್ನು ಸಂಪೂರ್ಣವಾಗಿ ಸುತ್ತುವರಿಯಲಾಗಿತ್ತು. ಭದ್ರತಾ ಪಡೆಗಳು ತಮ್ಮನ್ನು ಸುತ್ತುವರಿದಿದ್ದಾರೆ ಎಂದು ಗೊತ್ತಾಗುತ್ತಿದ್ದಂತೆ ಅಡಗಿದ್ದ ಉಗ್ರರು ಗುಂಡಿನ ದಾಳಿ ನಡೆಸಲು ಶುರು ಮಾಡಿದರು. ಅದಕ್ಕೆ ಪ್ರತಿಯಾಗಿ ಭದ್ರತಾ ಸಿಬ್ಬಂದಿಯೂ ಗುಂಡು ಹಾರಿಸಿದಾಗ ಇಬ್ಬರು ಭಯೋತ್ಪಾದಕರು ಸತ್ತಿದ್ದಾರೆ.

ಪ್ರಮುಖ ಸುದ್ದಿ :-   ಹೈದರಾಬಾದ್ ಮಳೆ: ಗೋಡೆ ಕುಸಿದು 7 ಕಾರ್ಮಿಕರು ಸಾವು

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement