ಮೂರು ಕೃಷಿ ಕಾಯ್ದೆಗಳ ರದ್ದು ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ

ನವದೆಹಲಿ: ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳ ರದ್ದು ಪ್ರಕ್ರಿಯೆ ಇಂದು ಬುಧವಾರ ಅಧಿಕೃತವಾಗಿದೆ. ಇದಕ್ಕೆ ಸಂಬಂಧಿಸಿದ ವಿಧೇಯಕಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.
ರೈತರ ಪ್ರತಿಭಟನೆಗೆ ಮಣಿದು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ಮೋದಿ ಘೋಷಿಸಿದನಂತರ ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲನೇ ದಿನವೇ ಕಾಯ್ದೆಗಳನ್ನು ಹಿಂಪಡೆಯುವ ಮಸೂದೆ ರದ್ದು ಮಾಡುವ ಮಸೂದೆ ಮಂಡಿದಸಿದ ನಂತರ ಅದು ಅಂಗೀಕಾರವಾಯಿತು.
ಚರ್ಚೆಗೆ ಒಳಪಡಿಸದೇ ಮಸೂದೆಗಳ ಅಂಗೀಕಾರ ಸರಿಯಲ್ಲ. ಪ್ರತಿಭಟನೆ ವೇಳೆ ನೂರಾರು ರೈತರು ಮೃತಪಟ್ಟಿದ್ದಾರೆ. ಅವರಿಗೆ ಕೇಂದ್ರ ಸರ್ಕಾರ ಪರಿಹಾರ ನೀಡಬೇಕು. ಮಸೂದೆಯನ್ನು ಚರ್ಚೆಗೆ ಒಳಪಡಿಸಬೇಕು ಎಂದು ವಿಪಕ್ಷಗಳು ಒತ್ತಾಯಿಸಿದ್ದವು. ವಿರೋಧದ ನಡುವೆಯೂ ಮಸೂದೆಗೆ ಅಂಗೀಕಾರವಾಯಿತು. ಈಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ.

0 / 5. 0

ಪ್ರಮುಖ ಸುದ್ದಿ :-   ಅಕ್ರಮ ಹಣ ವರ್ಗಾವಣೆ ಪ್ರಕರಣ : ಕೇಜ್ರಿವಾಲಗೆ ದೆಹಲಿ ಹೈಕೋರ್ಟ್‌ ನಿಂದ ಸಿಗದ ಜಾಮೀನು

ನಿಮ್ಮ ಕಾಮೆಂಟ್ ಬರೆಯಿರಿ

advertisement