ಹುಬ್ಬಳ್ಳಿ ಹೊಟೇಲ್‌‌ನಲ್ಲಿ ನಡೆದ ಸಭೆಯಲ್ಲಿ ನಾಯಕರ ಮುಂದೆಯೇ ಬಿಜೆಪಿ ಶಾಸಕರ ಜಗಳ..!

ಹುಬ್ಬಳ್ಳಿ: ಇಲ್ಲಿನ ಹೋಟೆಲ್ ವೊಂದರಲ್ಲಿ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿ ನಡೆದ ಬಿಜೆಪಿ ಸಭೆಯಲ್ಲಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸೇರಿದಂತೆ ಹಲವು ನಾಯಕರ ಸಮ್ಮುಖದಲ್ಲೇ ಹಾವೇರಿ ಜಿಲ್ಲೆಯ ಶಾಸಕರಿಬ್ಬರು ಪರಸ್ಪರ ಮುನಿಸಿಕೊಂಡ ಘಟನೆ ನಡೆದ ಬಗ್ಗೆ ವರದಿಯಾಗಿದೆ.
ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳನ್ನೊಳಗೊಂಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯಲಿರುವ ಹಿನ್ನೆಲೆಯಲ್ಲಿ ಬುಧವಾರ ಹುಬ್ಬಳ್ಳಿಯಲ್ಲಿ ಸಭೆ ಕರೆಯಲಾಗಿತ್ತು.
ಸಭೆಯಲ್ಲಿ ಹಾವೇರಿ ಜಿಲ್ಲೆ ರಾಣೆಬೆನ್ನೂರು ಶಾಸಕ ಅರುಣ ಕುಮಾರ, ವಿಧಾನ ಪರಿಷತ್ತು ಸದಸ್ಯ, ಮಾಜಿ ಸಚಿವ ಆರ್. ಶಂಕರ್ ನಡುವೆ ಚುನಾವಣೆ ಉಸ್ತುವಾರಿ ವಿಚಾರವಾಗಿ ಜಗಳವಾಡಿಕೊಂಡಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸೇರಿದಂತೆ ಹಲವು ನಾಯಕರ ಸಮ್ಮುಖದಲ್ಲೇ ಇದು ನಡೆದಿದೆ, ಒಂದು ಹಂತದಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿ ನಂತರ ಅರುಣಕುಮಾರ ಅವರು ರಾಜೀನಾಮೆ ಕೊಡಲು ಮುಂದಾಗಿದ್ದರು ಎನ್ನಲಾಗಿದೆ. ನಂತರ ನಾಯಕರು ಅವರನ್ನು ಸಮಾಧಾನಪಡಿಸಿದರು ಎಂದು ತಿಳಿದುಬಂದಿದೆ.

ಇದು ಉಸ್ತುವಾರಿ ವಿಚಾರದಲ್ಲಿ ಇಬ್ಬರ ಮಧ್ಯೆ ಮಾತಿನ ಚಕಮಕಿ ಆರಂಭವಾಯಿತು. ನಂತರ  ಇಬ್ಬರೂ ಅಭಿವೃದ್ಧಿ ಕಾರ್ಯಗಳ ಕುರಿತು ಒಬ್ಬರಿಗೊಬ್ಬರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಇದು ವಿಕೋಪಕ್ಕೆ ತಿರುಗಿ ಇಬ್ಬರ ಮಧ್ಯೆ ಜಗಳ ಶುರುವಾಯಿತು ಎಂದು ತಿಳಿದುಬಂದಿದೆ.
ಶಾಸಕ ಅರುಣ್‌ ಕುಮಾರ್‌ ಅವರನ್ನು ಹಾವೇರಿ ಜಿಲ್ಲಾ ಬಿಜೆಪಿ ಮುಖಂಡರು ಸಮಾಧಾನ ಪಡಿಸಲು ಪ್ರಯತ್ನಿಸಿದರು. ಸಭೆಯಲ್ಲಿ ಆದ ವಿದ್ಯಮಾನದಿಂದ ಬೇಸತ್ತು ಶಾಸಕ ಅರುಣ ಕುಮಾರ್‌ ಸಭೆಯಿಂದಲೇ ಹೊರನಡೆದರು. ನನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದಿದೆ. ಕಿಮ್ಮತ್ತು ಇಲ್ಲದಿದ್ದರೆ ಪ್ರಯೋಜನ ಏನೆಂದು ಅಸಮಾಧಾನ ವ್ಯಕ್ತಪಡಿಸಿದರು.
ಹಾವೇರಿ ಜಿಲ್ಲಾ ಅಧ್ಯಕ್ಷ ಸಿದ್ಧರಾಜ್ ಕಲಕೋಟಿ ಹಾಗೂ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್‌ ಪಾಟೀಲ್‌ ಅವರು ಅರುಣ್‌ ಕುಮಾರ್‌ ಅವರನ್ನು ಸಮಾಧಾನಪಡಿಸಿ ಮನವೊಲಿಸಿದರು. ಕೆಲವರು ಶಂಕರ ಅವರನ್ನು  ಸಮಾಧಾನ ಪಡಿಸಿದರು ಎನ್ನಲಾಗಿದೆ.
ರಾಣೇಬೆನ್ನೂರು ಶಾಸಕ ಅರುಣ್‌ ಕುಮಾರ್ ಹಾಗೂ ಪರಿಷತ್‌ ಸದಸ್ಯ ಆರ್. ಶಂಕರ್ ನಡುವೆ ಮಾತಿನ ಚಕಮಕಿ‌ ನಡೆದಿದೆ. ಗಲಾಟೆ ಆಗಿಲ್ಲ. ಅವರಿಬ್ಬರು ಕ್ಷೇತ್ರದ ವಿಚಾರದಲ್ಲಿ ಚರ್ಚೆ ಮಾಡುವ ವೇಳೆ ಮಾತಿನ ಚಕಮಕಿ ನಡೆದಿದೆ. ಪಕ್ಷದ‌ ನಾಯಕರು ಸಮಸ್ಯೆ ಬಗೆಹರಿಸಲಿದ್ದಾರೆ ಎಂದರು.
ಕ್ಷದ ನಾಯಕರ ಸಮ್ಮುಖದಲ್ಲಿ ಸಭೆ ನಡೆಸಿ ಚರ್ಚೆ ಮಾಡಿದ್ದೇವೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ ಎಂದು ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೀತಿಯೇ ಸಿದ್ದು, ಪರಮೇಶ್ವರ ವೀಡಿಯೊ ಹೊರಬರಬಹುದು : ರಮೇಶ ಜಾರಕಿಹೊಳಿ

 

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement