ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್​ಗಳ ಬೆಲೆ 100 ರೂಪಾಯಿ ಏರಿಕೆ

ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಇಂದು (ಡಿಸೆಂಬರ್ 1, 2021) ಮತ್ತೆ ಹೆಚ್ಚಿಸಲಾಗಿದೆ. 19 ಕೇಜಿಯ ವಾಣಿಜ್ಯ ಸಿಲಿಂಡರ್‌ನ ಬೆಲೆಯನ್ನು ತಲಾ 100 ರೂಪಾಯಿ ಹೆಚ್ಚಳ ಮಾಡಲಾಗಿದೆ. ನವೆಂಬರ್ 1ರಂದು ಬೆಲೆ ಏರಿಕೆ ಮಾಡಿದ ನಂತರ ಇದು ಎರಡನೇ ಹೆಚ್ಚಳವಾಗಿದೆ. ಬೆಲೆ ಹೆಚ್ಚಳದ ನಂತರ 19 ಕೇಜಿಯ ವಾಣಿಜ್ಯ ಸಿಲಿಂಡರ್ ಈಗ ದೆಹಲಿಯಲ್ಲಿ … Continued

ಓಮಿಕ್ರಾನ್ ಆತಂಕದ ಕಾರಣ ಕಠಿಣ ಕ್ರಮ ಅನಿವಾರ್ಯ; ಬೂಸ್ಟರ್ ಡೋಸ್ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚೆ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಕೋವಿಡ್-19 ಮೂರನೇ ಅಲೆ ಭೀತಿಯ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವ ಕುರಿತು ಕೇಂದ್ರ ಆರೋಗ್ಯ ಸಚಿವರೊಂದಿಗೆ ಚರ್ಚಿಸಲಾಗುವುದು. ಅಲ್ಲದೆ ಓಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಈ ಬಾರಿ ಆರಂಭಿಕವಾಗಿಯೇ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ … Continued

ಮಧ್ಯಪ್ರದೇಶದಲ್ಲಿ ಒಮ್ಮೆಲೇ 48 ಕಾಗೆಗಳು ಸಾವು : ಪರೀಕ್ಷೆಯಲ್ಲಿ ಹಕ್ಕಿ ಜ್ವರ ದೃಢ…!

ಭೋಪಾಲ್: ಮಧ್ಯಪ್ರದೇಶದ ಅಗರ್ ಮಾಲ್ವಾ ಜಿಲ್ಲೆಯಲ್ಲಿ ಕನಿಷ್ಠ 48 ಕಾಗೆಗಳು ಮೃತಪಟ್ಟಿದ್ದು, H5N8 ವೈರಸ್ (ಹಕ್ಕಿ ಜ್ವರ) ಇರುವುದು ದೃಢಪಟ್ಟಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ರಾಜ್ಯ ರಾಜಧಾನಿ ಭೋಪಾಲ್‌ನಿಂದ 180 ಕಿಮೀ ದೂರದಲ್ಲಿರುವ ಅಗರ್ ಮಾಲ್ವಾದಲ್ಲಿ ಈ ಕಾಗೆಗಳು ಕಳೆದ ನಾಲ್ಕು ದಿನಗಳಲ್ಲಿ ಮೃತಪಟ್ಟಿವೆ. ನಾವು ಸತ್ತ ಕಾಗೆಗಳ ಮಾದರಿಗಳನ್ನು ಪ್ರಯೋಗಾಲಯ ಪರೀಕ್ಷೆಗೆ … Continued

ಮಲ್ಯ ನ್ಯಾಯಾಂಗ ನಿಂದನೆ: ಜನವರಿ 18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ನವದೆಹಲಿ: ಬ್ಯಾಂಕ್‌ಗಳಿಗೆ ವಂಚಿಸಿ ಬ್ರಿಟನ್ನಿನಲ್ಲಿರುವ ಉದ್ಯಮಿ ವಿಜಯ ಮಲ್ಯ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ಮುಂದುವರಿಸಲು ಸುಪ್ರೀಂಕೋರ್ಟ್‌ ನಿರ್ಧರಿಸಿದೆ.ಜನವರಿ 18ರಂದು ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ನ್ಯಾಯಪೀಠ ಮಂಗಳವಾರ ಪ್ರಕಟಿಸಿದೆ. ಅವರು ಬ್ರಿಟನ್ನಿನಿಂದ ಗಡಿಪಾರು ಆಗುವವರೆಗೆ ಕಾಯಲು ಅಸಾಧ್ಯ ಎಂದೂ ಪೀಠ ಹೇಳಿದೆ. 40 ಮಿಲಿಯ ಅಮೆರಿಕನ್‌ ಡಾಲರ್‌ ಮೊತ್ತವನ್ನು ಕೋರ್ಟ್‌ ಆದೇಶದ ಹೊರತಾಗಿಯೂ ಮಕ್ಕಳ … Continued

ಓಮಿಕ್ರಾನ್‌ ರೂಪಾಂತರದ ಅಪಾಯದ ಮಧ್ಯೆ ಇಂದಿನಿಂದ ಅಂತಾರಾಷ್ಟ್ರೀಯ ಪ್ರಯಾಣಿಕರ ಆಗಮನಕ್ಕೆ ಹೊಸ ನಿಯಮಗಳು

ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆಯ ಕಾಳಜಿಯ ರೂಪಾಂತರ ಎಂದು ವರ್ಗೀಕರಿಸಲಾದ ಹೊಸ ಕೋವಿಡ್ ರೂಪಾಂತರದ ‘ಓಮಿಕ್ರಾನ್’ ಬಗ್ಗೆ ನವೀಕೃತ ಭಯದ ನಡುವೆ ಕೇಂದ್ರವು ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಪರಿಷ್ಕೃತ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಇಂದಿನಿಂದ (ಡಿಸೆಂಬರ್ 1ರಿಂದ) ಹೊಸ ಕೋವಿಡ್ ರೂಪಾಂತರ ಓಮಿಕ್ರಾನ್‌ನಿಂದ ಪ್ರಭಾವಿತವಾಗಿರುವ ದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಭಾರತಕ್ಕೆ ಆಗಮಿಸಿದಾಗ ನಡೆಸಲಾದ ಆರ್‌ಟಿ-ಪಿಸಿಆರ್ ಪರೀಕ್ಷೆಯ ನಕಾರಾತ್ಮಕ ವರದಿ … Continued