ಕನ್ನಡದ ಹಿರಿಯ ನಟ ಶಿವರಾಂ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ

ಬೆಂಗಳೂರು: ಕನ್ನಡದ ಖ್ಯಾತ ಹಿರಿಯ ನಟ ಶಿವರಾಂ ಮನೆಯಲ್ಲಿ ಪೂಜೆ ಮಾಡುವ ವೇಳೆ ಕುಸಿದು ಬಿದ್ದಿದ್ದು, ಅವರನ್ನು ಬೆಂಗಳೂರಿನ ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿರಿಯ ನಟ ಶ್ರೀನಿವಾಸ್ ಮೂರ್ತಿ ಅವರು ಈ ಕುರಿತು ಮಾಹಿತಿ ನೀಡಿದ್ದು, 84 ವರ್ಷ ವಯಸ್ಸಿನ ನಟ ಶಿವರಾಮ್ ಅವರು ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ
ಆರೋಗ್ಯದ ಬಗ್ಗೆ ಶಿವರಾಮ್ ಹಿರಿಯ ಪುತ್ರ ರವಿಶಂಕರ್ ಮಾಹಿತಿ ನೀಡಿದ್ದು, ಮೂರು ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಕಾರ್ ಆಕ್ಸಿಡೆಂಟ್ ಆಗಿತ್ತು. ನಂತರ ಮೂರು ದಿನಗಳಿಂದ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಮೂರು ದಿನದ ಹಿಂದೆ ಎಲ್ಲವೂ ನಾರ್ಮಲ್ ಎಂದು ವರದಿ ಬಂದಿತ್ತು. ಮೊನ್ನೆ ರಾತ್ರಿ ಮನೆಯಲ್ಲಿ ಅಯ್ಯಪ್ಪನ ಪೂಜೆ ಮಾಡಲು ರೂಂಗೆ ಹೋಗಿದ್ದರು. ಆ ವೇಳೆ ರೂಂನಲ್ಲಿ ಬಿದ್ದ ಹಿನ್ನೆಲೆ ತಲೆಗೆ ಮತ್ತೆ ಬಲವಾದ ಪೆಟ್ಟು ಬಿದ್ದಿದೆ ಎಂದು ಪುತ್ರ ರವಿಶಂಕರ್ ಮಾಹಿತಿ ನೀಡಿದ್ದಾರೆ.
. ಮೊನ್ನೆ ರಾತ್ರಿಯೇ ಅಸ್ಪತ್ರೆಗೆ ಕರೆದುಕೊಂಡು ಬಂದು ಸ್ಕ್ಯಾನಿಂಗ್ ಮಾಡಿಸಿದ್ದೆವು. ಸ್ಕ್ಯಾನಿಂಗ್ ರಿಪೋರ್ಟ್ ನಲ್ಲಿ ಮೆದುಳಿನಲ್ಲಿ ರಕ್ತಸ್ರಾವ ಆಗಿದೆ ಎಂಬುದು ಗೊತ್ತಾಯಿತು. ವೈದ್ಯರು ಸರ್ಜರಿ ಮಾಡಬೇಕು ಎಂದು ಹೇಳಿದರು. ಆದರೆ ನಮ್ಮ ತಂದೆಗೆ ವಯಸ್ಸಾದ ಹಿನ್ನೆಲೆ ಸರ್ಜರಿ ಮಾಡಲು ಆಗಿಲ್ಲ. ಸದ್ಯ ಐಸಿಯುನಲ್ಲೇ ಅವರಿಗೆ ಚಿಕಿತ್ಸೆ ಮುಂದುವರೆದಿದೆ’’ ಎಂದು ರವಿಶಂಕರ್ ಹೇಳಿದ್ದಾರೆ.
ಶಿವರಾಂ ಒಬ್ಬ ಕನ್ನಡದ ಖ್ಯಾತ ನಟ, ನಿರ್ಮಾಪಕ ಮತ್ತು ನಿರ್ದೇಶಕರಾಗಿದ್ದು, ಅವರ ಕನ್ನಡ ಸಿನಿಮಾ ವೃತ್ತಿಜೀವನವು ಆರು ದಶಕಗಳನ್ನು ವ್ಯಾಪಿಸಿದೆ. ಅವರು ಪ್ರಮುಖವಾಗಿ ಹಾಸ್ಯ ಪಾತ್ರಗಳು ಮತ್ತು ಪೋಷಕ ಭಾಗಗಳನ್ನು ಒಳಗೊಂಡಂತೆ ನೂರಾರು ಪಾತ್ರಗಳನ್ನು ನಿರ್ವಹಿಸಿದ್ದಾರೆ. ಅವರು ತಮ್ಮ ಹಿರಿಯ ಸಹೋದರ ಎಸ್. ರಾಮನಾಥನ್ ಅವರೊಂದಿಗೆ ಸೇರಿ 1972 ರಲ್ಲಿ ಹೃದಯ ಸಂಗಮ ನಿರ್ದೇಶಿಸುವುದರ ಜೊತೆಗೆ ರಾಶಿ ಬ್ರದರ್ಸ್ ಹೆಸರಿನಲ್ಲಿ ಹಲವಾರು ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ.
ಶಿವರಾಮ್ ಅವರು ಅನೇಕ ಧೀಮಂತ ನಿರ್ದೇಶಕರೊಂದಿಗೆ ಕೆಲಸ ಮಾಡಿದ ಹೆಗ್ಗಳಿಕೆಯನ್ನು ಹೊಂದಿದ್ದಾರೆ, ಅದರಲ್ಲಿ ಪುಟ್ಟಣ್ಣ ಕಣಗಾಲ್ ಅವರೊಂದಿಗಿನ ಅವರ ಒಡನಾಟವು ಹೆಚ್ಚು ನೆನಪಿನಲ್ಲಿ ಉಳಿಯುತ್ತದೆ. ರಾಜಕುಮಾರ್ ಅಭಿನಯದ ಸಿಂಗೀತಂ ಶ್ರೀನಿವಾಸ ರಾವ್ ನಿರ್ದೇಶನದ ಎಲ್ಲಾ ಏಳು ಕನ್ನಡ ಚಲನಚಿತ್ರಗಳಲ್ಲಿ ಅವರು ಭಾಗವಾಗಿದ್ದಾರೆ.

ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement