ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4ರ‌ ವರೆಗೂ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಸುರಿಯುತ್ತಿರುವ ಮಳೆ ಇನ್ನೂ ಮೂರು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ರಾಜ್ಯಾದ್ಯಂತ ಮತ್ತೆ ಮಳೆಯಾಗುತ್ತಿದೆ. ಇದು ಡಿ. 4ರ ವರೆಗೂ ಮುಂದುವರಿಯಲಿದ್ದು, ಕರಾವಳಿ, ಮಲೆನಾಡಿನಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕ, ಆಂಧ್ರಪ್ರದೇಶ, ಒಡಿಶಾ, ಮಹಾರಾಷ್ಟ್ರ ಹಾಗೂ ಗುಜರಾತ್​ ಸೇರಿದಂತೆ 10 ರಾಜ್ಯಗಳಲ್ಲಿ ಇಂದು ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಶನಿವಾರ ಚಂಡಮಾರುತ ಅಪ್ಪಳಿಸುವ ಎಚ್ಚರಿಕೆಯನ್ನು ನೀಡಲಾಗಿದೆ.
ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದಿನಿಂದ ಡಿ. 4ರವರೆಗೂ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಯಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಹಾಗೂ ಒಣಹವೆ ಮುಂದುವರಿಯಲಿದೆ.ಕೆಲವಡೆ ಅಲ್ಲಲ್ಲಿ ಮಳೆಯಾಗಬಹುದು ಎಂದು ಹೇಳಲಾಗಿದೆ.
ಗುಜರಾತ್​ನಲ್ಲಿ ಇಂದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಮಧ್ಯಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಮಹಾರಾಷ್ಟ್ರ, ಗೋವಾ, ರಾಜಸ್ಥಾನ, ಹರಿಯಾಣ, ಉತ್ತರ ಪ್ರದೇಶ, ಕೇರಳದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement