ಶಿವಮೊಗ್ಗದಲ್ಲಿ ನರ್ಸಿಂಗ್ ಕಾಲೇಜಿನ 23 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು:ಕಾಲೇಜ್- ಆಸ್ಪತ್ರೆ ಸೀಲ್ ಡೌನ್

ಶಿವಮೊಗ್ಗ: ಮೂರು-ನಾಲ್ಕು ತಿಂಗಳಿನಿಂದ ಕೊರೊನಾ ಸೋಂಕು ಈಗ ಮತ್ತೆ ಕಾಣಿಸಿಕೊಳ್ಳುತ್ತಿದೆ. ಈಗ ಶಿವಮೊಗ್ಗದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ 23 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕಾಲೇಜ್ ಹಾಗೂ ಅದೇ ಆವರಣದಲ್ಲಿರುವ ಆಸ್ಪತ್ರೆ ಸೀಲ್‍ಡೌನ್ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿರುವ ನರ್ಸಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಬೇರೆ ರಾಜ್ಯದವರೇ ಹೆಚ್ಚಿದ್ದಾರೆ. ಶಿವಮೊಗ್ಗದ ನಂಜಪ್ಪ ನರ್ಸಿಂಗ್ ಕಾಲೇಜಿನಲ್ಲಿ ಕೇರಳದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿದ್ದಾರೆ. ಅವರಲ್ಲಿ ಕೇರಳಕ್ಕೆ ಹೋಗಿ ಬಂದ ಕೆಲವಿದ್ಯಾರ್ಥಿಗಳಲ್ಲಿ ಶೀತ ಹಾಗೂ ಜ್ವರ ಕಾಣಿಸಿಕೊಂಡಿತ್ತು. ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿತ್ತು. ಆಗ ಕೆಲ ವಿದ್ಯಾರ್ಥಿಗಳಲ್ಲಿ ಕೋವಿಡ್ ದೃಢಪಟ್ಟಿತ್ತು. ನಂತರ ಎಚ್ಚೆತ್ತ ಜಿಲ್ಲಾಡಳಿತ ನರ್ಸಿಂಗ್ ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ತಪಾಸಣೆ ಮಾಡಿದಾಗ 23 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.
ಮುಂಜಾಗ್ರತಾ ಕ್ರಮವಾಗಿ ನರ್ಸಿಂಗ್ ಕಾಲೇಜು ಹಾಗೂ ಕಾಲೇಜು ಆವರಣದಲ್ಲೇ ಇರುವ ನಂಜಪ್ಪ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ 700ಕ್ಕೂ ಅಧಿಕ ಸಿಬ್ಬಂದಿಗೆ ಕೋವಿಡ್ ರಾಟ್‌ ಟೆಸ್ಟ್ ಮಾಡಿದೆ.
ಈಗಾಗಲೇ 300ಕ್ಕೂ ಅಧಿಕ ಜನರಿಗೆ ನೆಗೆಟಿವ್ ವರದಿ ಬಂದಿದ್ದು, ಉಳಿದವರ ವರದಿಗಾಗಿ ಜಿಲ್ಲಾಡಳಿತ ಕಾಯುತ್ತಿದೆ. ಇನ್ನು ನರ್ಸಿಂಗ್ ವಿದ್ಯಾರ್ಥಿಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ನರ್ಸಿಂಗ್ ಕಾಲೇಜಿನ ಜೊತೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ ಆಸ್ಪತ್ರೆಯ ಒಪಿಡಿ ಸಂಪೂರ್ಣವಾಗಿ ಬಂದ್ ಆಗಿದೆ. ಜೊತೆಗೆ ಆಸ್ಪತ್ರೆಗೆ ಆಗಮಿಸುವ ರೋಗಿಗಳ ಸಂಬಂಧಿಕರಿಗೂ ಪ್ರವೇಶ ನಿರ್ಬಂಧಿಸಲಾಗಿದೆ.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement