ಸರ್ಕಾರಿ ಕೋಟಾದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಶುಲ್ಕ ಹೆಚ್ಚಳ..

ಬೆಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸರ್ಕಾರ ಶುಲ್ಕ ಹೆಚ್ಚಳ ಮಾಡಿದೆ.
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ದಿಢೀರ್ ಆಗಿ 10 ಸಾವಿರ ರೂಪಾಯಿ ಹೆಚ್ಚಿಸಿದೆ.
ಖಾಸಗಿ ಇಂಜಿನಿಯರಿಂಗ್ ಕಾಲೇಜು ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿರುವ ಸರಕಾರಿ ಕೋಟಾದ ಸೀಟುಗಳಿಗೂ ಈ ನಿಯಮ ಅನ್ವಯವಾಗುತ್ತದೆ. ಈ ಹಿಂದೆ ಸರ್ಕಾರಿ ಕಾಲೇಜುಗಳಲ್ಲಿ 23,810 ರೂಪಾಯಿ ಪಾವತಿ ಮಾಡಬೇಕಿತ್ತು. ಈಗ 33,810 ರೂಪಾಯಿ ಶುಲ್ಕ ಪಾವತಿ ಮಾಡಬೇಕಿದೆ.
ಆದರೆ ಖಾಸಗಿ ಇಂಜಿನಿಯರ್ ಕಾಲೇಜು ಶುಲ್ಕ ಹೆಚ್ಚಳ ಮಾಡಿಲ್ಲ. ಕಾಲೇಜುಗಳು ಶೇ.30ರಷ್ಟು ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ದವು. ಕೊರೊನಾ ಹಿನ್ನೆಲೆ ಶುಲ್ಕ ಹೆಚ್ಚಿಸುವುದಿಲ್ಲ ಅಂತ ಸರ್ಕಾರ ಹೇಳಿತ್ತು. ಆದರೆ ಈಗ ಸರ್ಕಾರಿ ಕಾಲೇಜುಗಳ ಶುಲ್ಕ ಹೆಚ್ಚಿಸಿದೆ.

ಪ್ರಸ್ತುತ ಯಾವ ಯಾವ ಕೋಟಾದ ವಿದ್ಯಾರ್ಥಿಗಳಿಗೆ ಶುಲ್ಕ ಎಷ್ಟಾಗುತ್ತದೆ?
* ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ 33,810 ರೂ.
* ಸರ್ಕಾರಿ ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ 43,810 ರೂ.
* ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ (ಟೈಪ್-1) ಶುಲ್ಕ 83,526 ರೂ.
* ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ (ಟೈಪ್-2) ಶುಲ್ಕ 90,060 ರೂ.
* ಡೀಮ್ಡ್ ಮತ್ತು ಖಾಸಗಿ ವಿವಿ ಕಾಲೇಜುಗಳ ಶುಲ್ಕ 90,293 ರೂ.

 

ಪ್ರಮುಖ ಸುದ್ದಿ :-   ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement