ಕೊರೊನಾದಿಂದ ಮೃತಪಟ್ಟ ಬಿಪಿಎಲ್​ ಕುಟುಂಬದ ಸದಸ್ಯರಿಗೆ 1 ಲಕ್ಷ ರೂ.ಪರಿಹಾರ; ರಾಜ್ಯ ಸರ್ಕಾರದಿಂದ ತಿದ್ದುಪಡಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಕ್ಕೆ ಕೋವಿಡ್‌ ಪರಿಹಾರ ನೀಡುವುದಕ್ಕೆ ಸಂಬಂಧಿಸಿದಂತೆ ತಾನು ಈ ಮಹಿಂದೆ ನೀಡಿದ್ದ ಆದೇಶಕ್ಕೆ ತಿದ್ದುಪಡಿ ಆದೇಶ ಹೊರಡಿಸಿದೆ. ಡಿಸೆಂಬರ್ 2ರ ಗುರುವಾರ ಪ್ರಮುಖವಾದ ತಿದ್ದುಪಡಿ ಆದೇಶವನ್ನು ಹೊರಡಿಸಿದೆ.
ಈ ಹಿಂದೆ, ಸೆಪ್ಟೆಂಬರ್ 28ರಂದು ಹೊರಡಿಸಿದ್ದ ಆದೇಶ ಮತ್ತು ಅಕ್ಟೋಬರ್ 1ರಂದು ರಾಜ್ಯ ಸರ್ಕಾರವು ತಿದ್ದುಪಡಿಯ ಮಾಡಿದ ನಂತರದಲ್ಲಿ ಈಗ ಈ ಹೊಸ ತಿದ್ದುಪಡಿ ಬಂದಿದೆ. ಬಡತನ ರೇಖೆಗಿಂತ ಕೆಳಗಿರುವ “ದುಡಿಯುವ ವ್ಯಕ್ತಿ” ಕೊರೊನಾ ಸೋಂಕಿನಿಂದ ಮೃತಪಟ್ಟಲ್ಲಿ ಆ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಈ ಹಿಂದೆ ಆದೇಶ ಹೊರಡಿಸಲಾಗಿತ್ತು. ಕುಟುಂಬಕ್ಕೆ ಕೋವಿಡ್‌ ಪರಿಹಾರ ನೀಡಲು ಮೃತ ವ್ಯಕ್ತಿ “ದುಡಿಯುವ ಸದಸ್ಯನಾಗಿರಬೇಕು” ಎಂಬ ನಿಯಮ ಇತ್ತು. ಆದರೆ, ಈಗ “ದುಡಿಯುವ ಸದಸ್ಯನಾಗಿರಬೇಕು” ಎಂಬುದು ಅಧಿಸೂಚನೆಯಲ್ಲಿ ಎಲ್ಲೆಲ್ಲಿ ಬಳಕೆ ಆಗಿದೆಯೋ ಅಲ್ಲೆಲ್ಲ “ದುಡಿಯುವ” ಎಂಬ ಪದವನ್ನು ಬಿಟ್ಟು ಓದಿಕೊಳ್ಳಬೇಕು ಎಂದು ತಿದ್ದುಪಡಿಯಲ್ಲಿ ಸೂಚಿಸಲಾಗಿದೆ. ಹೀಗೆ ಮಾಡುವುದರಿಂದ ಬಿಪಿಎಲ್ ಕುಟುಂಬದ ಸದಸ್ಯರು ಯಾರೇ ಕೊವಿಡ್- 19ನಿಂದ ಮೃತಪಟ್ಟರೂ ಕರ್ನಾಟಕ ಸರ್ಕಾರದಿಂದ 1 ಲಕ್ಷ ರೂಪಾಯಿ ಪರಿಹಾರ ಆ ಕುಟುಂಬಕ್ಕೆ ದೊರೆಯಲಿದೆ.
ಅಲ್ಲದೆ, ಯಾವುದೇ ವಯಸ್ಸಿನ ನಿಬಂಧನೆ ಇಲ್ಲದೆ ಕೊವಿಡ್- 19 ವೈರಾಣು ಸೋಂಕಿನಿಂದ ಸದಸ್ಯರನ್ನು ಕಳೆದುಕೊಂಡ ಬಡತನ ರೇಖೆಗಿಂತ ಕೆಳಹೆ ಇರುವ (ಬಿಪಿಎಲ್‌) ಕುಟುಂಬದ ಅರ್ಹ ಕಾನೂನುಬದ್ಧ ವಾರಸುದಾರರಿಗೆ ರಾಜ್ಯ ಸರ್ಕಾರದ ರೂ. 1 ಲಕ್ಷ ಪರಿಹಾರದ ಆರ್ಥಿಕ ನೆರವನ್ನು ನೀಡತಕ್ಕದ್ದು ಎಂದು ತಿಳಿಸಲಾಗಿದೆ.
ಇದನ್ನು ಹೊರತುಪಡಿಸಿದಂತೆ ದಿನಾಂಕ 28.09.2021ರಂದು ಹೊರಡಿಸಿದ ಆದೇಶ, ಮಾರ್ಗಸೂಚಿಗಳು ಮತ್ತು ಆ ನಂತರ ಅಕ್ಟೋಬರ್ 1ರಂದು ತಂದ ತಿದ್ದುಪಡಿಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ನನ್ನ ಬ್ಲ್ಯಾಕ್‌ಮೇಲ್ ಮಾಡಲು ಯತ್ನ ; ಇಬ್ಬರ ಪಾತ್ರದ ಬಗ್ಗೆ ತನಿಖೆ : ಸ್ಟಿಂಗ್‌ ಬಗ್ಗೆ ಮೌನ ಮುರಿದ ಸಿದ್ದರಾಮಯ್ಯ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement