ಹುಬ್ಬಳ್ಳಿ: ಹುಬ್ಬಳ್ಳಿಯ ಆಯುರ್ವೇದ ಮಹಾವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಅವರು ಅಯೋಧ್ಯಯಲ್ಲಿ ಕಳೆದ ಕಳೆದ ನವಂಬರ್ 27-28 ರಂದು ನಡೆದ ಆಯುರ್ವೇದ ಕುಂಭ ಸಮಾವೇಶದಲ್ಲಿ ಭಾಗಹಿಸಿದ್ದರು. ಭಾಗವಹಿಸಿದವೆರಲ್ಲರಿಗೂಆರ್ ಟಿ- ಪಿ ಸಿ ಆರ್ ಟೆಸ್ಟ್ ಮಾಡಲಾಗಿತ್ತು. ಅವರಲ್ಲಿ ಇಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಈ ಸಮಾವೇಶದಲ್ಲಿ ದೇಶದ ವಿವಿಧ ಭಾಗಗಳ 2 ಸಾವಿರಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹುಬ್ಬಳ್ಳಿಯ ಆಯುರ್ವೇದ ಮಹಾವಿದ್ಯಾಲಯದ ಶಿಕ್ಷಕರೂ ಸೇರಿ 36 ಜನರು ಈ ಸಮಾವೇಶದಲ್ಲಿ ಭಾಗಿಯಾಗಿದ್ದರು. ಕಳೆದ ನವೆಂಬರ್ 30 ರಂದು ಹುಬ್ಬಳ್ಳಿಗೆ ಆಗಮಿಸಿದ್ದರು. ಹುಬ್ಬಳ್ಳಿಗೆ ಬಂದ ನಂತರ ಅವರೆಲ್ಲರೂ ಪ್ರತ್ಯೇಕತೆಯಲ್ಲಿದ್ದರು. ಸಂಸ್ಥೆಯ ನಿರ್ದೇಶನದ ಮೇರೆಗೆ 36 ಜನರಿಗೂ ಆರ್ ಟಿ- ಪಿ ಸಿ ಆರ್ ಟೆಸ್ಟ್ ಮಾಡಿಸಲಾಗಿತ್ತು. ಇಂದು ಇಬ್ಬರು ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟ ವರದಿ ಬಂದಿದೆ.
ಅವರಿಗೆ ಯಾವುದೇ ರೋಗ ಲಕ್ಷಣಗಳಿಲ್ಲ. ಎಲ್ಲ 36 ಜನರಿಗೂ ಪತ್ಯೇಕವಾಗಿರಲು ಸೂಚಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ