ಗೋಕರ್ಣ ಮಹಾಬಲೇಶ್ವರ ದೇವಾಲಯಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಭೇಟಿ: ಆತ್ಮಲಿಂಗಕ್ಕೆ ವಿಶೇಷ ಪೂಜೆ

ಅಂಕೋಲಾ:ರಾಜ್ಯದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಶ್ರೀಕ್ಷೇತ್ರ ಗೋಕರ್ಣದ ಮಹಾಬಲೇಶ್ವರ ದೇವಾಲಯಕ್ಕೆ ಶುಕ್ರವಾರ ಭೇಟಿ ನೀಡಿ ಪುರಾಣ ಪ್ರಸಿದ್ಧ ಆತ್ಮಲಿಂಗದ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ವಿಶೇಷ ಭದ್ರತೆಯಲ್ಲಿ ಮುರ್ಡೇಶ್ವರದಿಂದ ಗೋಕರ್ಣಕ್ಕೆ ಆಗಮಿಸಿದ ರಾಜ್ಯಪಾಲರನ್ನು ದೇವಾಲಯದ ಆಡಳಿತದ ವತಿಯಿಂದ ಗೌರವಪೂರ್ವಕವಾಗಿ ಬರಮಾಡಿಕೊಳ್ಳಲಾಯಿತು.
ರಾಜ್ಯಪಾಲರ ಭೇಟಿ ಹಿನ್ನೆಲೆಯಲ್ಲಿ ಗೋಕರ್ಣದಲ್ಲಿ ಬೆಳಿಗ್ಗೆಯಿಂದಲೇ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ದೇವಾಲಯದ ಪ್ರವೇಶ ದ್ವಾರದಲ್ಲಿ ಮೆಟಲ್ ಡಿಟೆಕ್ಟರ್ ಮೂಲಕ ಭಕ್ತರಿಗೆ ತಪಾಸಣೆ ನಡೆಸಿ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ದೇವಾಲಯದ ಸುತ್ತ ಮುತ್ತ ವಾಹನ ಸಂಚಾರ ಮತ್ತು ನಿಲುಗಡೆಗೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿತ್ತು.
ದಕ್ಷಿಣ ಕನ್ನಡ, ಉಡುಪಿ ಪ್ರವಾಸದಿಂದ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಶಿರೂರು ಗಡಿಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಪ್ರಿಯಾಂಗಾ. ಎಂ ಗೌರವಪೂರ್ವಕವಾಗಿ ಬರಮಾಡಿಕೊಂಡರು.
ಜಿಲ್ಲೆಯ ಪ್ರಸಿದ್ಧ ಪ್ರವಾಸಿ ಕ್ಷೇತ್ರ ಮುರ್ಡೇಶ್ವರಕ್ಕೆ ಭೇಟಿ ನೀಡಿದ ರಾಜ್ಯಪಾಲರು ದೇವಾಲಯದ ಬೃಹತ್ ಶಿವನ ಮೂರ್ತಿ ವೀಕ್ಷಿಸಿ ದೇವಾಲಯಕ್ಕೆ ತೆರಳಿ ಮುರ್ಡೇಶ್ವರ ಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು.
ಮುರ್ಡೇಶ್ವರ ಮಹಾದ್ವಾರದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಪನ್ನೇಕರ್ ರಾಜ್ಯಪಾಲರನ್ನು ಸ್ವಾಗತಿಸಿ ಗೌರವ ಸಲ್ಲಿಸಿದರು.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement