ಜವಾದ್‌ ಚಂಡ ಮಾರುತ ಪ್ರಭಾವ: ಕರ್ನಾಟಕದ ಕೆಲಜಿಲ್ಲೆಗಳಲ್ಲಿ ಮೂರು ದಿನ ಮಳೆ ಮುನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ರಾಜ್ಯದ ಕೆಲವು ಭಾಗದಲ್ಲಿ ಮುಂದಿನ ಎರಡು ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜವಾದ್ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಂಡಮಾರುತದ ಹಿನ್ನೆಲೆ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಹಾಗೂ ಮಲೆನಾಡು ಭಾಗದಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.
ಶನಿವಾರ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಜವಾದ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಪರಿಣಾಮ ಕರ್ನಾಟಕದಲ್ಲಿ ಡಿಸೆಂಬರ್ 6 ರ ವರೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

4 / 5. 1

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement