ಹುಬ್ಬಳ್ಳಿ-ಅಂಕೋಲಾ ರೈಲು: ವನ್ಯಜೀವಿ ಮಂಡಳಿಯಿಂದ ಹೈಕೋರ್ಟ್ ಸಾಧಕ-ಬಾಧಕದ ವರದಿ ಕೇಳಿದ್ದು ಸಕಾರಾತ್ಮಕ ಬೆಳವಣಿಗೆ

ಯಲ್ಲಾಪುರ: ಹುಬ್ಬಳ್ಳಿ- ಅಂಕೋಲಾ ರೈಲು ಮಾರ್ಗಕ್ಕೆ ಈಗಾಗಲೇ ಅರಣ್ಯ ಇಲಾಖೆಯಿಂದ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಆದರೆ, ಕೆಲವು ಸರ್ಕಾರೇತರ ಸಂಘ ಸಂಸ್ಥೆಗಳು ಮತ್ತು ಪರಿಸರವಾದಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರಿಂದ ಅದಕ್ಕೆ ಹಿನ್ನಡೆಯಾಗಿತ್ತು ಎಂದು ಅರಣ್ಯ ಮತ್ತು ಪರಿಸರ, ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಉಮೇಶ್ ಕತ್ತಿ ಹೇಳಿದರು.
ಪಟ್ಟಣಕ್ಕೆ ಗುರುವಾರ ಸಂಜೆ ತಮ್ಮ ಕುಟುಂಬದೊಂದಿಗೆ ಖಾಸಗಿ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು.
ಹೈಕೋರ್ಟ್, ವನ್ಯಜೀವಿ ಮಂಡಳಿಯಿಂದ ಸಾಧಕ ಬಾಧಕದ ವರದಿ ಕೇಳಿರುವುದು ಈ ಯೋಜನೆಯ ಬಗ್ಗೆ ಸಕಾರಾತ್ಮಕ ಬೆಳವಣಿಗೆಯಾಗಿದೆ. ಮಂಡಳಿಯು ಯೋಜನೆಗೆ ಪೂರಕ ವರದಿಯನ್ನು ನೀಡಲಿದೆ ಎಂಬ ವಿಶ್ವಾಸ ಸರ್ಕಾರಕ್ಕಿದೆ. ಅದಕ್ಕೆ ಬೇಕಾದ ಅಗತ್ಯ ಮಾಹಿತಿಗಳನ್ನು ನೀಡಲು ಸರ್ಕಾರ ಸಿದ್ಧವಿದೆ’ ಎಂದು ಹೇಳಿದರು.
ಜಿಲ್ಲೆಯಲ್ಲಿ ಪರಿಸರ ಪ್ರವಾಸೋದ್ಯಮ ಸ್ಥಾಪಿಸಲು ಯಾರಾದರೂ ಉದ್ಯಮಿಗಳು ಮುಂದೆ ಬಂದರೆ ಅವರಿಗೆ ಅರಣ್ಯ ಇಲಾಖೆ ಎಲ್ಲ ಸಹಕಾರ ನೀಡಲಿದೆ ಎಂದು ತಿಳಿಸಿದರು

ನಿಮ್ಮ ಕಾಮೆಂಟ್ ಬರೆಯಿರಿ

advertisement